ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ.
ವಿಜಯ ದರ್ಪಣ ನ್ಯೂಸ್..
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಸೂಲಿಬೆಲೆ ಹೋಬಳಿಯ ಸೋಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿಗಳಿಗಾಗಿ 10 ದಿನಗಳ ಕಾಲ ಉಚಿತವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಗಿರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರಜಿಲ್ಲೆ , ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟು 45 ವರ್ಷದೊಳಗಿನವರು ಮೇ 22 ರಂದು ಆಯೋಜಿಸಿರುವ ನೇರ ತರಬೇತಿಯಲ್ಲಿ ಹಾಜರಾಗಬಹುದು. ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ, 35 ಜನರಿಗೆ ಮಾತ್ರ ಅವಕಾಶವಿದ್ದು ಆಯ್ಕೆಯಾದವರಿಗೆ ಉಚಿತ ಊಟ ವಸತಿ ವ್ಯವಸ್ಥೆ ನೀಡಲಾಗುವುದು. ಮಾಹಿತಿಗಾಗಿ 8970476050 / 8660038694 ಸಂಪರ್ಕಿಸಬಹುದು.