ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಿತರಕ್ಷಣಾ ವೇದಿಕೆ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಣೆ
ವಿಜಯ ದರ್ಪಣ ನ್ಯೂಸ್
ಮಡಿಕೇರಿ: ನವೆಂಬರ್
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಕುವೆಂಪು ಉದ್ಯಾನವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ರವಿಗೌಡ ವಹಿಸಿಕೊಂಡಿದ್ದರು.
ಅತಿಥಿಗಳಾದ ವಿಷ್ಣು ಸೇನಾ ಜಿಲ್ಲಾಧ್ಯಕ್ಷ ರಫೀಕ್ (ದಾದಾ )ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆಮಾಡಿದರು ಮೂಡ ಅಧ್ಯಕ್ಷರಾದ ಮುನೀರ್ ಅಹ್ಮದ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ತಾಲೂಕು ಅಧ್ಯಕ್ಷೆ ಕವಿತಾ ಪ್ರಸಾದ್ ಅವರು ಕನ್ನಡವನ್ನು ಉಳಿಸಿ ಬೆಳೆಸಿ ನವೆಂಬರ್ ಒಂದಕ್ಕೆ ಕನ್ನಡ ರಾಜ್ಯೋತ್ಸವ ಸೀಮಿತವಾಗದೆ ಪ್ರತಿನಿತ್ಯವೂ ಕನ್ನಡವನ್ನು ಉಳಿಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಭಾಷಾ. ಕೋಟಿ ಮಾರಿಯಮ್ಮ ದಸರಾ ಸಮಿತಿ ಅಧ್ಯಕ್ಷ ಪ್ರಭುರೈ. ವೀರಭದ್ರ ಮುನೇಶ್ವರ ದೇವಾಲಯದ ಗೌರವ ಅಧ್ಯಕ್ಷ ಪಿ.ಜಿ.ಮಂಜುನಾಥ್ ,
ಫೀಲ್ಡ್ ಮಾರ್ಷಲ್ ಜನರಲ್ ಕೆ ಎಂ ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಎಂ ಎ. ಮುನೀರ್ ಮಾಚರ್. ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಅಧ್ಯಕ್ಷ ಅಂಬೇಕಲ್ ನವೀನ್. ಮಾಜಿ ನಗರಸಭಾ ಸದಸ್ಯರಾದ ಪ್ರಕಾಶ್ ಆಚಾರ್ಯ. ಆರ್ ಬಿ ಚಂದ್ರಶೇಖರ್.ನಗರ ಅಧ್ಯಕ್ಷ ಭರತ್ . ಮಡಿಕೇರಿ ಮಹಿಳಾ ಘಟಕದ ಅಧ್ಯಕ್ಷ ಮೀನಾಜ್ ಪ್ರವೀಣ್. ತಾಲೂಕು ಉಪಾಧ್ಯಕ್ಷ ನಾಗೇಶ್. ತಾಲೂಕು ಉಪ ಕಾರ್ಯದರ್ಶಿ ಅಕ್ಷಿತ್ . ತಾಲೂಕು ಮಹಿಳಾ ಅಧ್ಯಕ್ಷೆ ಕವಿತಾ ಪ್ರಸಾದ್. ಮೂರ್ನಾಡು ಹೋಬಳಿ ಅಧ್ಯಕ್ಷ ವಸಂತ್. ನಗರ ಮಹಿಳಾ ಉಪಾಧ್ಯಕ್ಷೆ ಲಿಲ್ಲಿಗೌಡ ನಗರ ಕಾರ್ಮಿಕ ಘಟಕದ ಅಧ್ಯಕ್ಷೆ ದಿವ್ಯ ವೇದಿಕೆ ಸದಸ್ಯರುಗಳಾದ ಸೈಮನ್. ಪುನೀತ್.ದೀಕ್ಷಿತ್. ಆಕಾಶ್ ಇನ್ನೂ ಹಲವು ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಹಾಜರಿದ್ದರು