ಜೂನ್ 29 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ

ವಿಜಯ ದರ್ಪಣ ನ್ಯೂಸ್…

ಜೂನ್ 29 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜೂನ್ 29 ಶನಿವಾರ ದಂದು  ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಸಚಿವ ಕೆ.ಹೆಚ್.ಮುನಿಯಪ್ಪ ವಹಿಸಲಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರ ಘನ ಉಪಸ್ಥಿತಿಯಲ್ಲಿ, ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು (ಎಂ.ಟಿ.ಬಿ), ರಾಮೋಜಿಗೌಡ, ಪ್ರವಾಸೋದ್ಯಮ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ
ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾಕೆ.ಫಾಹಿಂ,  ಬಯಪ ಅಧ್ಯಕ್ಷ ಶಾಂತಕುಮಾರ್, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಮುಳಗುಂದು, ಅಲೂರು ದುದ್ದನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಮ್ಮ ಉಪಸ್ಥಿತರಿರುತ್ತಾರೆ.

ವಿಶೇಷ ಆಹ್ವಾನಿತರಾಗಿ ದೇವನಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು ಕೆ.ಸಿ ವೆಂಕಟೇಗೌಡ, ದೇವನಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಮುನಿರಾಜು ಉಪಸ್ಥಿತರಿರುತ್ತಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೋ ಬಿ‌.ಎನ್.ಕೃಷ್ಣಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಮಲ್ಲಿಕಾರ್ಜುನ ಬಾಲದಂಡಿ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಡಿ.ಎಂ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು ಸಮುದಾಯದ ಮುಖಂಡರುಗಳು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿರುತ್ತಾರೆ.