ಶ್ರೀ ಚಾಮುಂಡೇಶ್ವರಿ ವರ್ಧಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…

ವಿಜಯಪುರದಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ  ವರ್ಧಂತಿ ಆಚರಣೆ

ವಿಜಯಪುರ ಪಟ್ಟಣದಲ್ಲಿ ನಗರ್ತ ಜನಾಂಗದ ವತಿಯಿಂದ ಸುಮಾರು 25 ವರ್ಷಗಳಿಂದ ಚಾಮುಂಡೇಶ್ವರಿ ವರ್ಧಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ನಗರ್ತ ಯುವಕ ಸಂಘ ಗೌರವಾಧ್ಯಕ್ಷ ಪಿ ಮುರಳೀಧರ್ ತಿಳಿಸಿದರು.

ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ವಿಶೇಷ ಪೂಜೆ ಪುಣಾಸ್ಕಾರಗಳು ಏರ್ಪಡಿಸಲಾಗಿತ್ತು.

ಶ್ರೀ ನಗರೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಪುನೀತ್ ಶಿವಕುಮಾರ್ ಮಾತನಾಡುತ್ತಾ ಮೈಸೂರಿನ ಚರಿತ್ರೆಯ ಪ್ರಕಾರ ಈಕೆ ಐತಿಹಾಸಿಕ ವೀರವನಿತೆ. ಅಪಾರ ಧೈರ್ಯಶಾಲಿನಿ. ಮೈಸೂರು ಒಡೆಯರ ಕುಲದೇವತೆ, ರಕ್ಷಣಾದೇವತೆ, ಅಧಿದೇವತೆಯಾಗಿದ್ದಾಳೆ. ಈಕೆಯ ಕಾಲ ಸುಮಾರು-೧೬ನೇ ಶತಮಾನವೆಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. * ಮಹಿಷ ಮಂಡಲ/ಮಹಾಬಲ ಬೆಟ್ಟ/ ಚಾಮುಂಡಿಬೆಟ್ಟವಾಗಲು ಹಲವು ಕಾಲಾಂತರಗಳಾಗಿವೆ.

ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. * ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ಯದು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ ದೇವಸ್ಥಾನ ಸೇರಿದಂತೆ ನಗರದಲ್ಲಿ ನಿರ್ಮಿಸಿದ ಸುಂದರ ದೇವಾಲಯಗಳು ಅತ್ಯಂತ ವಿಸ್ತೃತವಾಗಿವೆ.ನಂತರ ಬೆಟ್ಟದ ಚಾಮರಾಜ ಒಡೆಯರ್ ಎಂದು ಕರೆಯಲ್ಪಡುವ ಪ್ರಸಿದ್ಧ ರಾಜ ತಮ್ಮ ಆಳ್ವಿಕೆಯಲ್ಲಿ ಕೋಟೆಯನ್ನು, ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿದ್ದರು. ನಂತರ ಮಹಿಷೂರು, ಅಂತಿಮವಾಗಿ ಮೈಸೂರಾಗಿ ಬದಲಾಯಿತು.

ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣವನ್ನು ಮೈಸೂರಿಗೆ ಸ್ಥಳಾಂತರಿಸಲಾಯಿತು. ಹೀಗೆ ರಾಜ ಒಡೆಯರ್ ಆಳ್ವಿಕೆಯಲ್ಲಿ, ಮೈಸೂರು ತನ್ನ ವೈಭವವನ್ನು ಮರಳಿ ಪಡೆಯಿತು.

ಶ್ರೀ ಚಾಮುಂಡೇಶ್ವರಿ ತಾಯಿ ಪುತ್ದಳಿಯನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶ್ರೀ ಚಾಮುಂಡೇಶ್ವರಿ ದೇವಿಯವರಿಗೆ ಹೆಣ್ಣು ಮಕ್ಕಳಿಂದ ಸಂಜೆ ಲಲಿತ ಸಹಸ್ರನಾಮ ಕುಂಕುಮಾರ್ಚನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಗೌರವ ಕಾರ್ಯದರ್ಶಿ ಅಜಿತ್ ಪದಾಧಿಕಾರಿಗಳಾದ ಪ್ರವೀಣ್ ಮೋಹನ್ ಎನ್ ರುದ್ರಮೂರ್ತಿ ಸಿ ಭಾಸ್ಕರ್ ಸಿ ಸುರೇಶ್ ಮಹಿಳಾ ಸಂಘದ ಕಾರ್ಯದರ್ಶಿಗಳಾದ ಭಾರತಿ ಪ್ರಭುದೇವ್ ನಗರ್ತ ಯುವಕ ಸಂಘದ ಅಧ್ಯಕ್ಷ ಎ ಮಂಜುನಾಥ್ ಅಂಗಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದರು.