ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ನೀಡಿದ ಆಹಾರ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ಮಾಡಿದ ಆಹಾರ: ಸಚಿವ ಕೆಹೆಚ್. ಮುನಿಯಪ್ಪ.

ನವದೆಹಲಿ.24 ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ನವರು ಇಂದು ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ರವರನ್ನು ಭೇಟಿ ಮಾಡಿದರು.

ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಷೇತ್ರದಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ ನೋಂದಾಯಿಸಲಾದ 45000 MSME ಘಟಕಗಳು ಸುಮಾರು ನಾಲ್ಕು ಲಕ್ಷ ಉದ್ಯೋಗಾವಕಾಶದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಹೊಂದಿದ್ದು, ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಮೇಲಿನ ವಲಯಗಳಲ್ಲಿ ಕೌಶಲ್ಯ ತರಬೇತಿ ಹೆಚ್ಚಿಸುವ ಸಲುವಾಗಿ ಸಹಕರಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಉದ್ಯಮದ ಬೇಡಿಕೆ ಆಧಾರಿತ NSIC ತಾಂತ್ರಿಕ ಸೇವಾ ಕೇಂದ್ರ / ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡಲು ಸಚಿವರಿಗೆ ಮನವಿ‌ ಮಾಡಿದರು.

ಉತ್ತಮ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಮಿ ಮತ್ತು ಇತರ ಮೂಲಸೌಕರ್ಯಗಳಾದ ರಸ್ತೆ, ವಿದ್ಯುತ್ ಮತ್ತು ನೀರಿನ ಪೂರೈಕೆಯನ್ನು ಒದಗಿಸಲು ಸಿದ್ದರಿದ್ದು ತಾವು ಅನುಮತಿ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಹಕರಿಸಲು ಮನವಿಸಲ್ಲಿಸಿ

ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರದ ಯೋಜನೆಯನ್ನು ಸಾಧ್ಯವಾದಷ್ಟು ಬೇಗ ಮಂಜೂರು ಮಾಡಿ ಎಂದು ಸಚಿವರಲ್ಲಿ ವಿನಂತಿಸಿದರು.