ಮಾಲ್ಡೀವ್ಸ್ ಅಧ್ಯಕ್ಷರನ್ನು ಸ್ವಾಗತಿಸಿದ ಸಚಿವ ಡಾ. ಎಂ.ಸಿ ಸುಧಾಕರ್
ವಿಜಯ ದರ್ಪಣ ನ್ಯೂಸ್….
ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಬೆಂಗಳೂರಿಗೆ ಆಗಮನ
ಸಚಿವ ಡಾ. ಎಂ.ಸಿ ಸುಧಾಕರ್ ಅವರಿಂದ ಆತ್ಮೀಯ ಸ್ವಾಗತ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 09, 2024 :- ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಬುಧವಾರದಂದು ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಾಲ್ಡೀವ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಂಡಿಯಾ ಮಾಲ್ಡೀವ್ಸ್ ಹೈ ಕಮಿಷನರ್ ಮುನು ಮಹವರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ಬೆಂಗಳೂರು ನಗರ ಪೋಲೀಸ್ ಆಯುಕ್ತ ಬಿ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನ..
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 09, 2024 :- ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ 2024-25ನೇ ಸಾಲಿನಲ್ಲಿ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಚಾರಿ ಕುರಿಗಾರರ ಗುರುತಿನ ಚೀಟಿ ಪಡೆಯಲು, ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿದ್ದಲ್ಲಿ ಅರ್ಹರಿರುತ್ತಾರೆ. ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ/ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆಗಳ ಪಶು ವೈದ್ಯಾಧಿಕಾರಿಗಳು/ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು ಹಾಗೂ ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಂದ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ದೃಢೀಕರಣ ಪತ್ರ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅದೇ ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆ/ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಉಪ ನಿರ್ದೇಶಕರ ಕಛೇರಿ, ಬೆಂಗಳೂರು ವಿಭಾಗ, ಮೊಬೈಲ್ ಸಂಖ್ಯೆ: 9740171450 ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.