ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ

ವಿಜಯ ದರ್ಪಣ ನ್ಯೂಸ್….

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ

ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ ಫೆ.18. : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರ ಸಹಯೋಗದೊಂದಿಗೆ ಇಂದು ದೇವನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ”ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಅಧಿನಿಯಮ ಅನುಷ್ಠಾನ” ಕುರಿತು ಎರಡು ದಿನಗಳ ಓರಿಯಂಟೇಶನ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೋಲಾ ಪಂಡಿತ್ ಅವರು ಉದ್ಘಾಟಿಸಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ಸ್ವರೂಪ ಕಾಯ್ದೆ ಅನುಷ್ಠಾನಕ್ಕಾಗಿ ಸರ್ಕಾರಿ ದಿಂದ ಕೈಗೊಂಡಿರುವ ಕಾರ್ಯಕ್ರಮಗಳು, ಲಿಂಗ ತಾರತಮ್ಯ ಹಾಗೂ ಮಹಿಳೆಯರ ಮೇಲೆ ಅದರ ಪರಿಣಾಮಗಳು ಹಾಗೂ ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರಿಗೆ ಸಮಲೋಚನೆ ಕುರಿತಂತೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ನಿರೂಪಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮಿ, ತಾಲೂಕು ಸಿಡಿಪಿಒ ಮಹೇಶ್ ಸೇರಿದಂತೆ ಮಹಿಳಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.