ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್…

ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಏಪ್ರಿಲ್ 05, : ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಭಾರತ ಸರ್ಕಾರ ಸಚಿವಾಲಯದ ಚಿಲಿ ರಾಯಭಾರಿ ಶ್ರೀಮತಿ ಅಭಿಲಾಶಜೋಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ. ಜಿ, ಭಾರತ ಸರ್ಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ. ಪ್ರಪುಲ್ಲಚಂದ್ರ.ಎಸ್., ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತರಾದ ರಮೇಶ್. ಬಿ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಬಸಬರಾಜು.ಎ.ಬಿ., ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಅಜಿತ್ ಜಾನ್ ಜೋಸ್ವಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.