ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಹೇವಿಜಯ ದರ್ಣಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 30 :
ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS IDಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15 ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS IDಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.