ನಾಳೆ ದೇವನಹಳ್ಳಿಯಲ್ಲಿ ಜಿಲ್ಲಾಡಳಿತದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ವಿಜಯ ದರ್ಪಣ ನ್ಯೂಸ್,

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 14

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಗಸ್ಟ್ 15 ರಂದು ಬೆಳಗ್ಗೆ 9.00 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ಮಾಡಲಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್, ನೆಲಮಂಗಲ ವಿಧಾನಸಭಾ
ಕ್ಷೇತ್ರದ ಶಾಸಕ ಶ್ರೀನಿವಾಸಯ್ಯ.ಎನ್, ಪಶುಸಂಗೋಪನಾ ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

&&&&&&&&&&&&&&&&&&&&&

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳು ಸೇವಾ ಸಿಂಧು ತಂತ್ರಾಂಶದಲ್ಲಿ ಲಭ್ಯ..

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 14 

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು (ಡಿ.ಬಿ.ಟಿ-ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅನುಷ್ಟಾನಗೊಳಿಸಲಾಗಿದೆ.

ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ,ನಿರುದ್ಯೋಗ ಭತ್ಯೆ,

ಶಿಶುಪಾಲನಾ ಭತ್ಯೆ ಒಟ್ಟು 08 ಯೋಜನೆಗಳನ್ನು ಸೇವಾ ಸಿಂಧು ಮೂಲಕ ಅನುಷ್ಠಾನಗೊಳಿಸಲಾಗಿದೆ. 2023-24ನೇ ಸಾಲಿಗೆ ಅರ್ಹ ವಿಕಲಚೇತನರು 08 ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ (https://sevasindhu.karnataka.gov.in/Sevasindhu/Department Services) ಆನ್‌ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31ಕೊನೆಯ ದಿನವಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹

ತೋಟಗಾರಿಕ ಮಿಷನ್ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ..

 ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆಗಸ್ಟ್, 14 

2023-24 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು, ಸದರಿ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಫ್ರೂಟ್ ಮತ್ತು ಹೂ ಬೆಳೆ), ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಶೀಥಲ ವಾಹನ (Refrigerated Van), ಹಣ್ಣು ಮಾಗಿಸುವ ಘಟಕ (Ripening Chamber), ಹಸಿರುಮನೆ ನಿರ್ಮಾಣ, ಸಮುದಾಯ ಕೃಷಿಹೊಂಡ, ವೈಯಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಹಾಗೂ ಅಣಬೆ ಉತ್ಪಾದನಾ ಘಟಕಗಳಿಗೆ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ. 2023-24 ನೇ ಸಾಲಿನಲ್ಲಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು ಆಗಸ್ಟ್17 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು. ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ

ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು.
ಶ್ರೀ ಮಲ್ಲಿಕಾರ್ಜುನಾ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೇವನಹಳ್ಳಿ-(ಮೊ) 9480461234.
ಶ್ರೀಮತಿ ಎಂ.ಎಸ್.ದೀಪಾ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
(ಜಿಪಂ) ದೊಡ್ಡಬಳ್ಳಾಪುರ- (ಮೊ) 9880210892.
ಶ್ರೀಮತಿ ರೇಖಾ ಬಿ.ಪಿ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹೊಸಕೋಟೆ- (ಮೊ) 8217210320.
ಹರೀಶ್. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ-(ಮೊ) 9880461607 ಎಂದು ತೋಟಗಾರಿಕೆ ಉಪ ನಿರ್ದೇಶಕರು ಜೆ.ಗುಣವಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

##############################################

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ:ವಿಕಲಚೇತನರು ಸದುಪಯೋಗಪಡಿಸಿಕೊಳ್ಳಿ.

 ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 14 

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.

ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೊಂದಾಯಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ .

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.