ಮೋಟಾರ್‌ ರಿವೈಂಡಿಂಗ್ & ಪಂಪ್‌ಸೆಟ್‌ ರಿಪೇರಿ ತರಬೇತಿಗೆ ನೇರ ಸಂದರ್ಶನ

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 25

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್‌ ರಿವೈಂಡಿಂಗ್ & ಪಂಪ್‌ಸೆಟ್‌ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 2023ರ ಆಗಸ್ಟ್‌ 28 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಆಗಸ್ಟ್‌ 28 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 8884554510, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&

ಕಂಪ್ಯೂಟರ್‌ ಡಿಟಿಪಿ ತರಬೇತಿಗೆ ಆಗಸ್ಟ್‌ 29 ರಂದು ನೇರ ಸಂದರ್ಶನ

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ,. ಆಗಸ್ಟ್ 25 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್‌ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯು 2023ರ ಆಗಸ್ಟ್‌ 29 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಆಗಸ್ಟ್‌ 29 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9241482541, 8884554510, 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

********************************************************************†*********

ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ  .ಆಗಸ್ಟ್, 25 

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಶು ಆಸ್ಪತ್ರೆ ದೇವನಹಳ್ಳಿಯಿಂದ 2022-23 ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಶೇ.50% ಸಹಾಯಧನದೊಂದಿಗೆ ಹಸುಗಳ 2 ರಬ್ಬರ್ ನೆಲಹಾಸು ಗಳನ್ನು ವಿತರಿಸಲು ಅರ್ಜಿಗಳನ್ನು ಆಗಸ್ಟ್ 25 ರಿಂದ ಸೆಪ್ಟೆಂಬರ್ 04 ರವರೆಗೆ ಸ್ವೀಕರಿಸಲಾಗುತ್ತಿದ್ದು, ಅರ್ಜಿಗಳನ್ನು ತಾಲೂಕಿನ ಎಲ್ಲಾ ಪಶುವೈದ್ಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ಸಂಸ್ಥೆಯಲ್ಲಿ ನೀಡಬಹುದಾಗಿದೆ. ಹಸುಗಳ 2 ರಬ್ಬರ್ ನೆಲಹಾಸು ಬೆಲೆಯು ರೂ.5600/-ಗಳಾಗಿದ್ದು, ಎಲ್ಲಾ ವರ್ಗದ ಫಲಾನುಭವಿಗಳಿಗೆ ಸಹಾಯಧನದ ಮೊತ್ತ ರೂ.2800/- ಹಾಗೂ ಫಲಾನುಭವಿಗಳ ವಂತಿಕೆ ರೂ.2800/- . ತಾಲ್ಲೂಕಿನ ಎಲ್ಲಾ ಹೈನುಗಾರರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ದೇವನಹಳ್ಳಿಯ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

################################################₹######################################################

ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 25

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ‌ kacdc.karnataka.gov.ing ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 18.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು
1) ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು,
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),
3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, 4) ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು,
5) ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
6) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ಮೀಸಲಾತಿ ಇರಿಸಿದೆ. 7) ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು.

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಲ್ಲಿ ಕನಿಷ್ಠ ರೂ.50,000/- ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು.

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನವನ್ನು ನೀಡಲಾಗುವುದು.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು.

1) ಈ ಯೋಜನೆಯಡಿ 2 ರಿಂದ 05 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು.
2) ಅರ್ಜಿದಾರರಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
3) ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು.
4) ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು.

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. 1) ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. 2) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು)
ಸಂಪರ್ಕ ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಛೇರಿ ಸಂಖ್ಯೆ:-080-29605761.
ನಿಗಮದ ಸಹಾಯವಾಣಿ: 94484 51111 (ಬೆಳಿಗ್ಗೆ 10.00 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕ ಕಛೇರಿ, ಬೆಂಗಳೂರು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.