ವೀರಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ ಶೀಘ್ರ ಪುನರ್ ಸ್ಥಾಪಿಸಿ: ಉದ್ಘಾಟನಾ ಫಲಕ ಸ್ತoಬ ಕೂಡ ಸ್ಮಾರಕದಂತೆ, ಸಂರಕ್ಷಿಸಲು ಅಧಿಕಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ.

ವಿಜಯ ದರ್ಪಣ ನ್ಯೂಸ್

ಮಡಿಕೇರಿ .ಆಗಸ್ಟ್ 25 

ರಾಷ್ಟ್ರಕಂಡ ಮಹಾನ್ ಸೇನಾ ನಾಯಕ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಶೀಘ್ರ ಪುನರ್ ಸ್ಥಾಪಿಸಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.

ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸ್ಥಳಾಂತರಿಸಲಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಮಾಜಿ ಸಚಿವ ಎಂ.ಸಿ.ನಾಣಯ್ಯ ಹಾಗೂ ಸ್ಥಳೀಯ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದಂತೆ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ನಿರ್ಮಾಣ ಮಾಡಬೇಕು ಎಂದು  ಶಾಸಕ ಎ.ಎಸ್.ಪೊನ್ನಣ್ಣ ಅವರು ಹೇಳಿದರು.

ಪ್ರತಿಮೆ ಪುನರ್ ನಿರ್ಮಾಣ ಸಂಬಂಧ ಈಗಾಗಲೇ ಅಂದಾಜುಪಟ್ಟಿ ತಯಾರಿಸಲಾಗಿದ್ದು, ಕೆ ಎಸ್ ಆರ್  ಟಿ ಸಿ ವಿಭಾಗದಿಂದ 10 ಲಕ್ಷ ರೂ. ಭರಿಸಲಿದ್ದಾರೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು.

ಕೊಡಗಿನ ಜನರ ಭಾವನೆಗೆ ಧಕ್ಕೆ ಆಗದಂತೆ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ಸ್ಥಾಪಿಸಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ತುರ್ತು ಕ್ರಮವಹಿಸುವಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು.

ಪ್ರತಿಮೆ ವೀಕ್ಷಣೆಗೂ ಮೊದಲು ಜನರಲ್ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ಶಾಸಕರು ವೀಕ್ಷಿಸಿದರು. ಈ ಸಂದರ್ಭ ಉದ್ಘಾಟನ ಫಲಕ ಸ್ತoಬ ಸ್ಥಳಾಂತರ ಮಾಡದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಮೆಯ ಉದ್ಘಾಟನೆಯನ್ನು ಮಾಡಿದಂತ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣಿಕ್ ಶಾ ಪಲಕ ಸ್ತoಬವು ಕೂಡ ಸ್ಮಾರಕವಾಗಿದ್ದು ಇದನ್ನು ಕೂಡ ಸಂರಕ್ಷಿಸಬೇಕು ಕೂಡಲೇ ಇದನ್ನು ಕೂಡ ಸದ್ಯಕ್ಕೆ ಈ ಸ್ಥಳದಿಂದ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅನಿತಾ ಪೂವಯ್ಯ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಕೆ ಎಸ್‍ ಆರ್ ಟಿ ಸಿ ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ, ಪ್ರಮುಖರಾದ ತೆನ್ನಿರಾ ಮೈನಾ, ಬಿ.ಎಸ್.ತಮ್ಮಯ್ಯ, ಧರ್ಮಜ ಉತ್ತಪ್ಪ ಇತರರು ಇದ್ದರು.

@@@@@@@@@@@@@@@@@@@@@&&&&&&&&&&&&&&&&&&&&&&&&&&@@@@@@@@@@@@@@@@@@@@@

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ: ಶಾಸಕ ಎ ಎಸ್ ಪೊನ್ನಣ್ಣ.

ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಗೆ ಇಬ್ಬರು ತುತ್ತಾಗಿದ್ದು, ನೋವು ತಂದಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಅವರು ಹೇಳಿದರು.

ಕಾಡು ಪ್ರಾಣಿಗಳ ಹಾವಳಿ ತಡೆಯಬೇಕಿದ್ದು, ಆ ನಿಟ್ಟಿನಲ್ಲಿ ಆಗಸ್ಟ್, 26 ರಂದು ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.

ಕಾಡಾನೆ ಹಾವಳಿಗೆ ತುತ್ತಾದ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಸಭೆ ನಡೆಸಲಿದ್ದಾರೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಹ ಆಗಮಿಸಲಿದ್ದಾರೆ ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಸಚಿವರ ಗಮನಕ್ಕೆ ತಂದಾಗ ಆಗಸ್ಟ್, 26 ರಂದು ಅರಣ್ಯ ಸಚಿವರು ಭೇಟಿ ನೀಡುತ್ತಿದ್ದು, ಮಾನವ ಮತ್ತು ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದರು.