ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಯೋಜನೆ ಸಹಕಾರಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.

óವಿಜಯ ದರ್ಪಣ ನ್ಯೂಸ್

ದೇವನಹಳ್ಳಿ ,ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 30

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಂದು ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವುದರಿಂದ ಕುಟುಂಬದ ಜೀವನ ಪರಿಸ್ಥಿತಿ ಸುಧಾರಿಸಲು ಸಹಕಾರಿ, ಮಹಿಳೆಯರನ್ನು ಸಶಕ್ತರನ್ನಾಗಿಸಿ ಸ್ವಾವಲಂಬನೆಯ ಬದುಕು ಸಾಗಿಸಲು, ಅರ್ಥಿಕವಾಗಿ ಸಬಲರಾಗಲು ಈ ಯೋಜನೆ ಉಪಯೋಗವಾಗುತ್ತದೆ ಎಂದರು.

ಜಿಲ್ಲೆಯ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಏಕ ಕಾಲಕ್ಕೆ ಚಾಲನೆಗೊಂಡ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದ ರಾಜ್ಯಮಟ್ಟದ ಕಾರ್ಯಕ್ರಮವನ್ನು ಗೃಹಲಕ್ಷ್ಮಿ ಫಲಾನುಭವಿಗಳು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭೆ ಉಪಾಧ್ಯಕ್ಷೆ ಗೀತಾ ಶ್ರೀಧರ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಅಧಿಕಾರಿ ಅನಿತಾ ಲಕ್ಷ್ಮಿ, ಜಿಲ್ಲಾ ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕಿ ಶಾಲಿನಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಸಿ. ರೂಪಾ. ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು, ಗೃಹಲಕ್ಷ್ಮಿ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

 

###########################################################################

ಸರ್ಕಾರ ನೀಡುವ ಗೃಹ ಲಕ್ಷ್ಮಿ ಹಣವನ್ನು ಸದುದ್ದೇಶಕ್ಕೆ ಬಳಸಿಕೊಳ್ಳಿ : ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ.ಎನ್ ಅನುರಾಧ.

ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 30 

“ಹೆಣ್ಣು ಸಂಸಾರದ ಕಣ್ಣು ಎನ್ನುತ್ತಾರೆ, ಸರ್ಕಾರ ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಪ್ರತಿ ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿ ಕುಟುಂಬದ ಆರ್ಥಿಕ ನಿರ್ವಹಣೆಗೆ ಆಸರೆಯಾಗಿದೆ. ಈ ಹಣವನ್ನು ಎಲ್ಲ ಮಹಿಳೆಯರೂ ಸದುಪಯೋಗ ಪಡಿಸಿಕೊಳ್ಳಿ” ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ ಎನ್ ಅನುರಾಧಾ ಅವರು ಮಹಿಳೆಯರಿಗೆ ಕಿವಿ ಮಾತು ಹೇಳಿದರು.

ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಆಯೋಜಿಸಿದ್ದ ಗೃಹ ಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹೊಸಕೋಟೆ ತಾಲ್ಲೂಕು ವತಿಯಿಂದ ಮುಗಬಾಳ, ದೊಡ್ಡನಲ್ಲಾಲ, ಶಿವನಾಪುರ, ಹಾಗೂ ತಾವರೆಕೆರೆ ಗ್ರಾಮ ಪಂಚಾಯಿತಿಗಳು ಸೇರಿ ಮುಗಬಾಳದಲ್ಲಿ ಇರುವಂತಹ ಮಧುರ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಎಲ್ ಈ ಡಿ ಪರದೆ ಮುಖಾಂತರ ಮೈಸೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ನೇರ ಪ್ರಸಾರ ಕಾರ್ಯಕ್ರಮವನ್ನು ಫಲಾನುಭವಿಗಳು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಹೊಸಕೋಟೆ ಶಾಸಕರಾದ ಶರತ್ ಬಚ್ಚೇಗೌಡರ ಧರ್ಮಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಅವರು ಭಾಗವಹಿಸಿ ಫಲಾನುಭವಿಗಳ ಜೊತೆಯಲ್ಲಿ ಕುಳಿತು ಕಾರ್ಯಕ್ರಮವನ್ನು ವೀಕ್ಷಿಸಿದ್ದು ವಿಶೇಷವಾಗಿತ್ತು.
ಅನೇಕ ಮಹಿಳೆಯರು ತಮ್ಮ ತಮ್ಮ ಅನುಭವಗಳನ್ನು ಈ ಸಮಯದಲ್ಲಿ ಹಂಚಿಕೊಂಡರು.

ಈ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ರಮೇಶ್, ಮುಗಬಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ ನಾಗರಾಜ್, ಉಪಾಧ್ಯಕ್ಷೆ ನಾರಾಯಣಮ್ಮ ತಿಮ್ಮಪ್ಪ, ದೊಡ್ಡನಲ್ಲಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ರಾಜಣ್ಣ, ಉಪಾಧ್ಯಕ್ಷ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಸ್ತೂರಮ್ಮ ನಂಜಪ್ಪ,  ಗೆಡಿಗೇನಹಳ್ಳಿ ನಂಜಪ್ಪ,  ಹಲಸಹಳ್ಳಿ ರವಿರಾಜ್,  ಮುಗಬಾಳ ಅನ್ವರ್, ಸದಸ್ಯರುಗಳಾದ ನಿಡಘಟ್ಟ ರಮೇಶ್, ನಾಸೀರ್, ಮುನಿಕೃಷ್ಣ, ಹಾಗೂ ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾ , ತಾಲ್ಲೂಕು ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಅಧಿಕಾರಿಗಳು ಪಾಲ್ಗೊಂಡಿದ್ದರು.

 

.&&&&&&&&&&&&&&&&&&&&&&&&&&&&&&&&&&&&&&&&&&&&&&&&&&

 

ಕೋಳಿ ಸಾಕಾಣಿಕೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 30

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ *ಕೋಳಿ ಸಾಕಾಣಿಕೆ* ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

*ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 05* ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324, 9241482541, 8884554510 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.