ಆರಿವು ಸಾಲ (ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್
ಬಿಜಿಎಸ್ ನಗರ,ದೇವನಹಳ್ಳಿ ತಾಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 01,
2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences, Food Nutrition and Dietetics, B.Pharma, M.Pharma, Pharma D and D Pharma ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ರಿನಿವಲ್ (Arivu Renewal) ಸಾಲದ ಯೋಜನೆಯಡಿ (ವಿದ್ಯಾಭ್ಯಾಸ ಸಾಲ) ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇಕಡ 12 ರಷ್ಟನ್ನು ಪಾವತಿಸಿ ನಿಗಮದ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಮತ್ತು ಇಂತಹ ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವ Original New Indemnity, Bond, ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ ಮತ್ತು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.
ಅರಿವು ರಿನಿವಲ್’ (Arivu Renewal) ಸಾಲದ ಯೋಜನೆಯ ಆನ್‌ಲೈನ್ ವೆಬ್‌ಪೇಜ್
Kmdconline.karnataka.gov.in ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ)
ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಎ)
ನಂ-562110,
ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-27681736
Gmail: kmdcbrural@gmail.com
ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.೫೫೫೫೫೫೫೫೫೫೫೫೫೫೫೫೫೫೫೫೫೫೫೫೫೪೪೪೫೫೫೫೫೫೪೪೪೪೪೪೪೪೪೪೪೪೪೪೪೫೫೫೫೫
ಹಸುಗಳ ರಬ್ಬರ್ ನೆಲಹಾಸು ವಿತರಿಸಲು ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 01
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ, ಹೊಸಕೋಟೆಯಿಂದ 2022-23 ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಶೇಕಡ 50 ರಷ್ಟು ಸಹಾಯಧನದೊಂದಿಗೆ ಹಸುಗಳ 2 ರಬ್ಬರ್ ನೆಲಹಾಸುಗಳನ್ನು ವಿತರಿಸಲು ಅರ್ಜಿಗಳನ್ನು ದಿನಾಂಕ 01.09.2023 ರಿಂದ 10.09.2023 ರವರೆಗೆ ಸ್ವೀಕರಿಸಲಾಗುತ್ತಿದ್ದು, ಅರ್ಜಿಗಳನ್ನು ತಾಲ್ಲೂಕಿನ ಎಲ್ಲಾ ಪಶುವೈದ್ಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ಸಂಸ್ಥೆಯಲ್ಲಿ ನೀಡಬಹುದಾಗಿದೆ. ಹಸುಗಳ 2 ರಬ್ಬರ್ ನೆಲಹಾಸು ಬೆಲೆಯು ರೂ. 5600/- ಗಳಾಗಿದ್ದು, ಎಲ್ಲಾ ವರ್ಗದ ಫಲಾನುಭವಿಗಳಿಗೆ ಸಹಾಯಧನದ ಮೊತ್ತ ರೂ.2800/- ಹಾಗೂ ಫಲಾನುಭವಿ ವಂತಿಕೆ ರೂ.2800/- ಆಗಿದ್ದು ತಾಲ್ಲೂಕಿನ ಅರ್ಹ ಎಲ್ಲಾ ಹೈನುಗಾರರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೊಸಕೋಟೆ ಪಶು ಆಸ್ಪತ್ರೆಯ ಮುಖ್ಯಪಶುವೈದ್ಯಾಧಿಕಾರಿ
(ಆಡಳಿತ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦
ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
ದೇವನಹಳ್ಳಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 01
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದವರಿಗೆ ಅಂದರೆ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು, ಮತ್ತು ಪಾರ್ಸಿ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ:-
ಅ) ಏತ ನೀರಾವರಿ ಯೋಜನೆ
ಈ ಯೋಜನೆಯಡಿಯಲ್ಲಿ ನಿರಂತರವಾಗಿ ಹರಿಯುತ್ತಿರುವ ನೀರನ್ನು (ನದಿ) ಪೈಪ್‌ಲೈನ್ ಮೂಲಕ ಮೇಲಕ್ಕೆ ಎತ್ತಿ, ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ನಿಗಮವು ಅನುಷ್ಠಾನಗೊಳಿಸಿ ನಂತರ ಅದನ್ನು ಫಲಾನುಭವಿಗಳ ಗ್ರಾಹಕರ ಸಹಕಾರ ಸಂಘಕ್ಕೆ ಹಸ್ತಾಂತರ ಮಾಡಲಾಗುವುದು. ಉತ್ತಮ ಬೆಳೆ ಪಡೆಯುವ ಸಲುವಾಗಿ ಕೃಷಿ ತಜ್ಞರಿಂದ ಸಲಹೆ ಮತ್ತು ನೆರವನ್ನು ಕೊಡಿಸಲಾಗುವುದು, ಏತ ನೀರಾವರಿ ಯೋಜನೆಯ ಘಟಕ ವೆಚ್ಚವನ್ನು ಪ್ರತಿ ಎಕರೆಗೆ ರೂ.40,000/- ದಂತೆ ಬಿಡುಗಡೆ ಮಾಡಲಾಗುವುದು, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.
ಆ) ವೈಯಕ್ತಿಕ ಕೊಳವೆ ಬಾವಿ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಲ್ಲಿ ಹರಿಯುವ ನೀರಿನ ವ್ಯವಸ್ಥೆ ಲಭ್ಯವಿರುವುದಿಲ್ಲವೋ ಅಂತಹ ಸ್ಥಳದಲ್ಲಿ ತಜ್ಞ ಭೂ ವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲ ಬಿಂದು ವ್ಯಾಪ್ತಿಯೊಳಗೆ ನೆಲದಡಿಯಲ್ಲಿ ಕೊಳವೆ ಬಾವಿಯನ್ನು ಕೊರೆದು, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಕೊಳವೆ ಮೂಲಕ ಕೃಷಿಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆ ಬಾವಿ ಕೊರೆಯಿಸಿ ಅಥವಾ ತೆರೆದ ಬಾವಿಯನ್ನು ನಿರ್ಮಿಸಿ, ಅದಕ್ಕೆ ನಿಗಮದಿಂದ ಪಂಪ್ ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.4.00 ಲಕ್ಷಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಗದಿಪಡಿಸಿರುತ್ತದೆ. ಈ ಮೊತ್ತವು ಕೊಳವೆಬಾವಿ ಕೊರೆಯುವಿಕೆ, ಪಂಪು, ಮೋಟಾರು ಸರಬರಾಜು ಮತ್ತು ವಿದ್ಯುದೀಕರಣ ಠೇವಣಿ ಮೊತ್ತ ಒಳಗೊಂಡಿರುತ್ತದೆ. ವಿದ್ಯುದ್ದೀಕರಣ ಠೇವಣಿ ರೂ.75000/-ವನ್ನು ನಿಗಮದಿಂದ ನೇರವಾಗಿ ಸಂಬಂಧಪಟ್ಟ ಎಸ್ಕಾಂಗಳಿಗೆ ಪಾವತಿಸಲಾಗುವುದು. ಈಗಾಗಲೇ ತಮ್ಮ ಜಮೀನಿಗೆ ನೀರಾವರಿ ಸೌಲಭ್ಯವನ್ನು ಹೊಂದಿರುವ ರೈತರಿಗೆ ಹನಿ ನೀರಾವರಿ ಅಳವಡಿಸಲು ತೋಟಗಾರಿಕೆ ಇಲಾಖೆಯ ಮಾರ್ಗಸೂಚಿ ಪ್ರಕಾರ ಸಹಾಯಧನ ನೀಡುವುದು.
1.ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ
ಧಾರ್ಮಿಕ ಅಲ್ಪಸಂಖ್ಯಾತರ
ಸಮುದಾಯಕ್ಕೆ ಸೇರಿದವರಾಗಿರಬೇಕು.
2. ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಜಮೀನಿರಬೇಕು.
3. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
4. ಅರ್ಜಿದಾರರು ಸಣ್ಣ, ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
5.ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ.96,000/- ಗಳನ್ನು ಮೀರಬಾರದು.
6. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಇರಬೇಕು.
7. ಅಂಬೇಡ್ಕರ ಅಭಿವೃದ್ಧಿ ನಿಗಮ ಮತ್ತು ದೇವರಾಜ್ ಅರಸು ಅಭಿವೃದ್ಧಿ ನಿಗಮಗಳಲ್ಲಿ ಇರುವಂತೆ ಆರ್ಜಿದಾರರ ಗರಿಷ್ಠ ವಯೋಮಿತಿ 55 ವರ್ಷ ಇರುವುದನ್ನು ರದ್ದುಪಡಿಸಲಾಗಿದೆ.
ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ಅರ್ಜಿಯನ್ನು ದಿನಾಂಕ:-22.08.2023 ರಿಂದ 25.09.2023 ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಛೇರಿ: 080-27681786/
Gmail: kmdcbrural@gmail.com ಸಹಾಯವಾಣಿ ಸಂಖ್ಯೆ:-8277799990 (24*7) ಸಂಪರ್ಕಿಸಬಹುದಾಗಿದೆ ಎಂದು
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ
ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
@@@@@@@@@@@@@@@@@@@@@@@@@@@@@@@@@@@@@@@@@
ಶ್ರಮ ಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನ
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಸೆಪ್ಟೆಂಬರ್ 01
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಯೋಜನೆಯಡಿ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ರೂ.25,000/- ಸಾಲ ಮತ್ತು ರೂ.25,000/- ಸಹಾಯಧನ ಸೇರಿ ಕನಿಷ್ಠ ಒಟ್ಟು ರೂ.50000/- ಕಡಿಮೆ ಇಲ್ಲದಂತೆ ಸಾಲ ಮತ್ತು ಸಹಾಯಧನವನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಒದಗಿಸಲಾಗುವುದು. ಪ್ರತಿ ಫಲಾನುಭವಿಗೆ ರೂ.50,000/- ಸಾಲ ಮತ್ತು ಸಹಾಯಧನ ಮೊತ್ತ ನಿಗದಿಪಡಿಸಲಾಗಿದ್ದು ಯಾವುದೇ ಕಾರಣಕ್ಕೂ ಸಾಲ ಮತ್ತು ಸಹಾಯಧನದ ಮೊತ್ತವನ್ನು ನಿಗದಿಪಡಿಸಿರುವ ಮೊತ್ತಕ್ಕಿಂತ ಕಡಿಮೆ ಮಾಡಬಾರದು.
ಮಾರ್ಗಸೂಚಿಗಳು :
1. ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು ಆಗಿರಬೇಕು.
4. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ.3.50 ಲಕ್ಷದೊಳಗಿರಬೇಕು.
5. ಆರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ ಕೇಂದ್ರ ಸರ್ಕಾರದ ಉದ್ಯೋಗಿಯಾಗಿರಬಾರದು.
5. ಅರ್ಜಿದಾರರು KMDCಯಲ್ಲಿ ಸುಸ್ತಿದಾರಾಗಿರಬಾರದು.
ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಛೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಛೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹
ಅಲ್ಪಸಂಖ್ಯಾತ ಸಮುದಾಯ ಆಧಾರಿತ ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 01,
ಕರ್ನಾಟಕ ಅಲ್ಪಸಂಖ್ಯಾತ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ನಿರುದ್ಯೋಗ ಹೊಂದಿರುವ ಯುವಕ ಯುವತಿಯರಿಗೆ ಸ್ವಂತ ಉದ್ಯೋಗ/ಕಛೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ (ಪುರುಷರು ಮತ್ತು ಮಹಿಳೆಯರು) ಪ್ರಮಾಣೀಕರಣ ಕೋರ್ಸ್
• Beauty Parlour Training (Men and Women) certification course with recognized centres.
• ಹೆವಿ ಅರ್ಥ್ ಮೂವರ್ ತರಬೇತಿ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ)
• Heavy Earth Mover Operatoin Training (JCB, Crane, Pock lain, Heavy Vehicle Operation)
• ಶಾರ್ಟ್ ಹ್ಯಾಂಡ್ ಟ್ರೈನಿಂಗ್ Short hand training
• ಭದ್ರತಾ ಸೇವೆಗಳ ತರಬೇತಿ Security Services Training
*ಅರ್ಜಿ ಸಲ್ಲಿಸಲು ಆರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು, ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿ ಪರ ತರಬೇತಿಯನ್ನು ಪಡೆದಿರಬಾರದು, ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ನಗರ ಪ್ರದೇಶಗಳಲ್ಲಿ ರೂ.1,03,000/-, ಗ್ರಾಮಾಂತರ ಪ್ರದೇಶದಲ್ಲಿ ರೂ.96,000 ಮೀರಬಾರದು, ತರಬೇತಿಯನ್ನು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯ ಮತ್ತು ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಿಂದ
ನೀಡಲಾಗುವುದು.
ಅರ್ಜಿ ಯನ್ನು ಆನ್ಲೈನ್ ವೆಬ್ಸೈಟ್
https://kmdconline.karnataka.gov.in ಮೂಲಕ ಆಗಸ್ಟ್ 22 ರಿಂದ ಕೊನೆಯ ದಿನಾಂಕ ಸಪ್ಟೆಂಬರ್ 25 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ…
ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಛೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ,
ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎಸ್ ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಬಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಛೇರಿ: (080)-27681786 ಅಥವಾ
Gmail: kmdcbrural@gmail.com, ಸಹಾಯವಾಣಿ ಸಂಖ್ಯೆ-8277799990 (24×7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.