ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು

ವಿಜಯ ದರ್ಪಣ ನ್ಯೂಸ್

ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ ಇಂದು COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿದ್ದು, ದಾಳಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂಗಳ ದಂಡವನ್ನು ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಆರೋಗ್ಯ ಸಿಬ್ಬಂದಿ ಧನಂಜಯ್ ಹಾಗೂ ಪೊಲೀಸ್ ಸಿಬ್ಬಂದಿ ನಾಗರಾಜು ಹಾಜರಿದ್ದರು.

ಬೆಂ.ಗ್ರಾ. ಜಿಲ್ಲೆ: ‌‌ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24  : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್‌ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರುವ ಪರಿಶಿಷ್ಟ ಜಾತಿಗೆ ಸೇರಿದ, ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಮಾಹೆಯಾನ ರೂ.15000 ಗಳ ಸ್ಟೇಫಂಡ್ ನೀಡಲಾಗುವುದು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಆಧಾರ್, ಎಸ್.ಎಸ್. ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ತ್ರಿ-ಪ್ರತಿಯಲ್ಲಿ 2023ರ ಡಿಸೆಂಬರ್ 01 ರೊಳಗಾಗಿ ಉಪನಿರ್ದೆಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.17, ಭಗವಾನ್ ಮಾಹಾವೀರ ರಸ್ತೆ, ವಾರ್ತಾ ಸೌಧ, 2ನೇ ಮಹಡಿ, ಇನ್‌ಫೆಂಟ್ರಿ ರಸ್ತೆ, ಬೆಂಗಳೂರು-560001 ಗೆ ಸಲ್ಲಿಸುವುದು.

ಆಸಕ್ತರು ಅರ್ಹತೆಗಳು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿ ಅಥವಾ ಮೊ. ಸಂಖ್ಯೆ: 9480841249 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ನವೆಂಬರ್ 27ರಿಂದ ಜಿಲ್ಲಾಮಟ್ಟದ ಯುವಜನೋತ್ಸವ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 27 ರಂದು ಜಗಜೀವನ ರಾಮ್ ಭವನ, ಡಿ ಕ್ರಾಸ್ ರಸ್ತೆ ದೊಡ್ಡಬಳ್ಳಾಪುರ ಇಲ್ಲಿ ನಡೆಸಲಾಗುತ್ತಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷ ವಯೋಮಾನದೊಳಗಿನ ಯುವಜನರಿಗೆ ಮಾತ್ರ ಸಂಬಂಧಿಸಿದ ದಾಖಲೆಗಳನ್ನು ಆಧರಿಸಿ ಪರಿಗಣಿಸಲಾಗುವುದು ಮತ್ತು ಈ ಕಾರ್ಯಕ್ರಮವನ್ನು ಮೊದಲಿಗೆ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವುದು, ಇಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.

ರಾಜ್ಯ ಮಟ್ಟದಲ್ಲಿ ಪಾಲ್ಗೊಂಡು ಸ್ಪರ್ಧಾತ್ಮಕ ಸ್ಫರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದವರು ರಾಷ್ಟ್ರ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿಧಿಸಲಿದ್ದಾರೆ.
ಸ್ಪರ್ಧೆಗಳ ವಿವರ ಹಾಗೂ ಹೆಚ್ಚಿನ‌ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 080-29787443 ಅಥವಾ 9980590960 / 9632778567 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.