75ನೇ ಗಣರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ.
ವಿಜಯ ದರ್ಪಣ ನ್ಯೂಸ್
ಜಿಲ್ಲಾಡಳಿತ ಭವನದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ.
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 26 : “75ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
###################################
ಕುವೆಂಪು ಉದ್ಯಾನವನದಲ್ಲಿ ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ.
ಮಡಿಕೇರಿ ಜನವರಿ 26: ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಕುವೆಂಪು ಉದ್ಯಾನವನದಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು ಮೊದಲಿಗೆ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು
ಅತಿಥಿಗಳಾಗಿ ಆಗಮಿಸಿದ ಕೊಡಗು ವಿಷ್ಣು ಸೇನೆ ಜಿಲ್ಲಾಧ್ಯಕ್ಷ ರಫೀಕ್ ದಾದಾ ಅವರಿಂದ ಧ್ವಜಾರೋಹಣ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್. ಮಹಿಳಾ ತಾಲೂಕು ಉಪಾಧ್ಯಕ್ಷೆ ಕವಿತಾ ಪ್ರಸಾದ್ ಮಡಿಕೇರಿ ನಗರ ಕಾರ್ಯದರ್ಶಿ ಲಿಲ್ಲಿ ಗೌಡ. ನಗರ ಉಪಾಧ್ಯಕ್ಷ ಪುನೀತ್ ವೇದಿಕೆ ವಿದ್ಯಾರ್ಥಿ ಘಟಕದ ಸದಸ್ಯ ಹರ್ಷಿತ್. ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್ . ವಿಷ್ಣುಸೇನಾ ಸಮಿತಿಯ ಸದಸ್ಯ ಆನ್ಸರ್ . ನಾಗರಾಜ್. ಮಹಾದೇವ್ ಪ್ರವೀಣ್ ಲೋಬೋ ಹಾಗೂ ಇನ್ನು ಹಲವು ಕಾರ್ಯಕರ್ತರು ಸಾರ್ವಜನಿಕರು ಪಾಲ್ಗೊಂಡಿದ್ದರು.