ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದ ಸಿ.ಇ.ಒ ಡಾ.ಕೆ.ಎನ್ ಅನುರಾಧ
ವಿಜಯ ದರ್ಪಣ ನ್ಯೂಸ್
ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದ ಸಿ.ಇ.ಒ ಡಾ.ಕೆ.ಎನ್ ಅನುರಾಧ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 15 :- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ, ಹಾದ್ರಿಪುರ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಂವಿಧಾನ ಜಾಗೃತಿ ಜಾಥ ಮೆರವಣಿಗೆ ಅದ್ಧೂರಿಯಾಗಿ ನಡೆಸಲಾಯಿತು.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಂವಿಧಾನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಊರಿನ ಮಹಿಳೆಯರು ಕಳಶ ಹೊರುವ ಮೂಲಕ ಬರಮಾಡಿಕೊಂಡರು, ಸೈಕಲ್ ಜಾಥಾ, ಎತ್ತಿನ ಗಾಡಿ ಜಾಥಾ, ಬೈಕ್ ರ್ಯಾಲಿ, ಪಂಜಿನ ಮೆರವಣಿಗೆಯೊಂದಿಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಜಾಗೃತಿ ಜಾಥಾ ನಡೆಯಿತು.
ದೊಡ್ಡ ತುಮಕೂರು ಸಂವಿಧಾನ ಜಾಗೃತಿ ಜಾಥಾದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಭಾಗಿಯಾಗಿ ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆ ಬೋಧಿಸಿ, ಸಂವಿಧಾನ ಮಹತ್ವ, ಸಂವಿಧಾನ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ, ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಜಾ ಮಂಜುನಾಥ್, ಸವಿತ ವಿ ರವಿಕುಮಾರ್, ಉಪಾಧ್ಯಕ್ಷೆ ಅಂಜಿನಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಸನ್ನ ಕುಮಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಯಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಸದಸ್ಯರು, ಮುಖಂಡರು, ವಿವಿಧ ಸಂಘಟನೆಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
೫೫೫೫೫೫೫೫೫೫೫೫೫೫೫೫೫೫೫೫೫೫೫೫೫೫
ಸೇವಾಲಾಲ್ ಜಯಂತಿ ಆಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತ ಸೇವಾಲಾಲ್ ಜಯಂತಿ ಆಚರಣೆಯನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ಆಚರಿಸಲಾಯಿತು.
ಜಿಲ್ಲಾಧಿಕಾರಿಗಳು ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಡಳಿತ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.