ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ರಾಧಿಕಾ ತಾಲೂಕಿಗೆ ಮೇಲುಗೈ
ವಿಜಯ ದರ್ಪಣ ನ್ಯೂಸ್
ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ವಿದ್ಯಾರ್ಥಿನಿ ರಾಧಿಕಾ ತಾಲೂಕಿಗೆ
ಮೇಲುಗೈ
ದೇವನಹಳ್ಳಿ ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಕೂಲಿ ಕಾರ್ಮಿಕನ ಮಗಳು ಕುಮಾರಿ ರಾಧಿಕಾ ಅವರು ಪಟ್ಟಣದ ಸಮೀಪವಿರುವ ಕನಕಶ್ರೀ ಖಾಸಗಿ ಪಿಯು ಕಾಲೇಜಿನಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಶೇ.100 ಅಂಕ ಪಡೆದಿದ್ದ ಲ್ಲದೆ 600 ಕ್ಕೆ 583 ಅಂಕವನ್ನು ಪಡೆದುಕೊಳ್ಳುವ ಮೂಲಕ ದೇವನಹಳ್ಳಿ ತಾಲೂಕಿನಲ್ಲಿ ಮೇಲುಗೈ ಸಾಧಿಸಿದ್ದಾಳೆ.
ಕುಟುಂಬದಲ್ಲಿ ಬಡತನವಿದ್ದರೂ ಲೆಕ್ಕಿಸದೆ, 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ನಂತರ ಕನಕಶ್ರೀ ಎಂಬ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿಗೆ ದಾಖಲಾಗಿ, ಬೋಧಕರ ಸಲಹೆ ಸೂಚನೆಗಳನ್ನು ಪಾಲಿಸಿದ್ದಲ್ಲದೆ ದಿನದ 10 ಗಂಟೆಗಳ ಕಾಲ ಓದಿನ ಕಡೆ ಹೆಚ್ಚಿನ ಕಾಳಜಿ ವಹಿಸಿದ್ದೆ, ನಿತ್ಯ ಅಭ್ಯಾಸದ ಫಲವಾಗಿ 583 ಮತಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.
ನನ್ನ ಈ ಸಾಧನೆಗೆ ಪ್ರೋತ್ಸಾಹ ನೀಡಿದ ಗುರು-ಹಿರಿಯರು ಮತ್ತು ಪೋಷಕರಿಗೆ ಅಭಿನಂದನೆ ಸಲ್ಲಿಸಲು ಇಷ್ಟಪಡುತ್ತೇನೆ. ಸಣ್ಣಂದಿನಿಂದಲೂ ನಾನು ಓದುವ ಹವ್ಯಾಸ ಬಹಳಷ್ಟಿತ್ತು. ಈ ಫಲಿತಾಂಶದಲ್ಲೂ ಕೂಡ ನನಗೆ ಅಷ್ಟೇನೂ ಸಮಾಧಾನ ಬಾರದಿದ್ದರೂ ಮುಂದಿನ ಉನ್ನತ ವ್ಯಾಸಂಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಗ್ರಾಮಕ್ಕೆ ಹಾಗೂ ಪೋಷಕರಿಗೆ ಕೀರ್ತಿ ತರಲು ಮಾಧ್ಯಮಗಳ ಮೂಲಕ ಬಯಸುತ್ತೇನೆ ಎಂದು ತಿಳಿಸಿರುತ್ತಾರೆ.
&&&&&&&&&&&&&&&&&&&&&&&&&
ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 16 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು /ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಷರತ್ತುಗಳು, ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 9.05.2024 ಹಾಗೂ ಕೊನೆಯ ದಿನಾಂಕ 21.05.2024 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787448, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080-27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.