ಜಗಜ್ಯೋತಿ ಬಸವ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ
ವಿಜಯ ದರ್ಪಣ ನ್ಯೂಸ್..
ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಯೋಗಿ, ಜಗಜ್ಯೋತಿ, ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಕಾಯಕಯೋಗಿ ಬಸವಣ್ಣನವರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲ ಗುರುಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಮೂರ್ತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.