ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್…
ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 15 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಹಾಗೂ ಇತರೆ ವರ್ಗಗಳ ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಸ್ಥಾನ, ವಿಕಲಚೇತನರಿಗೆ ಶೇ.3ರಷ್ಟು ಪ್ರವೇಶ ಮೀಸಲಿರಿಸಿದೆ.
ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಶಿಕ್ಷಣ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ PCMB ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸುಗಳ (NETT/JEE(Mains & Advanced)KCET) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
ಪ್ರಥಮ ಪಿ.ಯು.ಸಿ ಸಹ ಶಿಕ್ಷಣ (PCMB) ತರಗತಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿಯನ್ನು ಪ್ರಾಂಶುಪಾಲರಿಂದ ಪಡೆದು, ಸಂಬಂಧಪಟ್ಟ ಪ್ರಾಂಶುಪಾಲರು, ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ರವರಿಗೆ ದಿನಾಂಕ: 27/05/2023 ರೊಳಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ-9632933397, 8660971267, 9972238296, 9980903199. ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ. ದೂರವಾಣಿ ಸಂಖ್ಯೆ- ದೂ:080-27931899, ಮೊ.8310397004 ಅಥವಾ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455. ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 15: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಷರತ್ತುಗಳು :
1. ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
2. 2023-24ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು.
3. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ.2,50,000/-ಗಳ ಒಳಗಿರಬೇಕು. ತಹಶಿಲ್ದಾರ್ ರವರಿಂದ ಪಡೆದ ಜಾತಿ ಮತ್ತು ಆದಾಯ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು.
4. ಪ್ರತಿಷ್ಠಿತ ಶಾಲೆಗಳಿಗೆ ಒಮ್ಮೆ ದಾಖಲಾದ ವಿದ್ಯಾರ್ಥಿಗಳು 10 ಅಥವಾ 12ನೇ ತರಗತಿಯವರೆಗೆ ದಾಖಲಾದ ವಿದ್ಯಾಸಂಸ್ಥೆಯಲ್ಲಿಯೇ ವ್ಯಾಸಂಗ ಮುಂದುವರೆಸುವುದು.
5. 10ನೇ ತರಗತಿ ವ್ಯಾಸಂಗ ಪೂರ್ಣಗೊಳಿಸಿದ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಪ್ರತಿಷ್ಠಿತ ಶಾಲೆಯಲ್ಲಿ ಪಿ.ಯು.ಸಿ. ತರಗತಿಗಳನ್ನು ನಡೆಸದೇ ಇದ್ದಲ್ಲಿ, ಅದೇ ಜಿಲ್ಲೆಯಲ್ಲಿನ ಪಿ.ಯು.ಸಿ. ಇರುವ ಪ್ರತಿಷ್ಠಿತ ಶಾಲೆ/ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.
6. ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆದುಕೊಳ್ಳಬಹುದಾಗಿದೆ.
7. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21.05.2024 ರವರೆಗೆ ನಂತರ ಬಂದ ಅರ್ಜಿಗಳನ್ನು ಪರಿಗಣಸಲಾಗುವುದಿಲ್ಲ.
8. ಪ್ರವೇಶ ಪರೀಕ್ಷೆಯನ್ನು ಡಯಟ್ ಮೂಲಕ ನಡೆಸಿ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು.
9. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಈ ಕೆಳಕಂಡ ಅತಿ ಹಿಂದುಳಿದ ವರ್ಗದವರಿಗೆ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ.
ಪೌರ ಕಾರ್ಮಿಕರ ಮಕ್ಕಳು. ಸಫಾಯಿ ಕರ್ಮಚಾರಿಗಳವರ ಮಕ್ಕಳು. ಸ್ಮಶಾನಗಳಲ್ಲಿ ಕಾರ್ಯನಿರ್ವಹಿರ್ವಹಿಸುತ್ತಿರುವವರ ಮಕ್ಕಳು. ದೇವದಾಸಿರವರ ಮಕ್ಕಳು. ಅಂಗವಿಕಲತೆಯನ್ನು ಹೊಂದಿರುವವರ ಮಕ್ಕಳು. ಕೋವಿಡ್-19 ಮುಂತಾದ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು. ಸಿಂಗಲ್ ಪ್ಯಾಮಿಲಿ ಮಕ್ಕಳು. ಯೋಜನಾ ನಿರಾಶ್ರಿತರ ಮಕ್ಕಳು. ಮಾಜಿ ಸೈನಿಕರ ಮಕ್ಕಳು. ಕೊಳಗೇರಿಯಲ್ಲಿ ವಾಸಿಸುತ್ತಿರುವವರ ಮಕ್ಕಳು. ಕೃಷಿ ಕಾರ್ಮಿಕರ ಮಕ್ಕಳು. ಸಾಲ ಬಾದೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು. ದೌರ್ಜನ್ಯದಲ್ಲಿ ನೊಂದವರ ಮಕ್ಕಳು. ಜೀತ ವಿಮುಕ್ತ ಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787448, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080-27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 15 :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತು 10 ದಿನಗಳ ಉಚಿತ ತರಬೇತಿಯ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.