ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ವಿಜಯ ದರ್ಪಣ ನ್ಯೂಸ್…

ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ದೊಡ್ಡಬಳ್ಳಾಪುರ  ಮೇ 28 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಇಂದು ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಕಾರ್ಯಾಗಾರದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ನುಡಿದರು.

ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್, ಮುನಿರಾಜು, ಮಧು, ಮಂಜುನಾಥ್ ರವರು ಉಪಸ್ಥಿತರಿದ್ದರು.

ಕೆ.ವಿ.ಕೆ.ಯ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಿ.ಸ.ತೋ.ನಿ ಹಾಗೂ ಹರ್ಷವರ್ಧನ್ ,ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು.

ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.

ಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂ

ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನ ಆಚರಣೆ

ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 28  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ *ವಿಶ್ವ ಮಲೇರಿಯಾ ದಿನ* ದ ಅಂಗವಾಗಿ “ಹೆಚ್ಚು ಸಮಾನತೆಯ ಜಗತ್ತಿಗೆ, ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ” ಎಂಬ ಘೋಷವಾಕ್ಯದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಮಲೇರಿಯಾ ದಿನದ ಅರಿವು ಮೂಡಿಸುವ ಸಲುವಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಿಂದ ನಗರದ ಟಿ.ಬಿ ವೃತ್ತದ ವರೆಗೆ ಜಾಥಾವನ್ನು ಮಾಡಲಾಯಿತು. ಮಾನವ ನಿರ್ಮಿತ ಸರಪಳಿ ರಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಾರದ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಶಿವಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಕೀಟ ಶಾಸ್ತ್ರ ತಜ್ಞರಾದ ಲತಾ, ಆರೋಗ್ಯ ಮೇಲ್ವಿಚಾರಕರಾದ ನಟರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

#####################################№#########

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 28  : ರಾಜ್ಯದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2023-24ನೇ ಸಾಲಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು 2024 ರ ಜುಲೈ 01 ರಿಂದ 2025 ಮಾರ್ಚ್ 31ರ ವರೆಗೆ ಆಯೋಜಿಸುವ ಸಂಬಂಧ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ 2024 ಜೂನ್ 03 ರಂದು ಸಂಜೆ 5.30 ರ ವರೆಗೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ ಹಾಗೂ ಸಂದರ್ಶನದ ದಿನಾಂಕ: 06 ಜೂನ್ 2024 ಆಗಿರುತ್ತದೆ, ಆದುದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರ ಕಛೇರಿ (ಜಿಪಂ), ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಕಛೇರಿಗೆ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ: ಕನ್ನಡ ವಿಷಯಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ವಯೋಮಿತಿ: ಪರಿಶಿಷ್ಟ ಜಾತಿ/ಪಂಗಡ/ಅಂಗವಿಕಲ ರಿಗೆ ಕನಿಷ್ಠ 18 ವರ್ಷ ಮತ್ತು ಮಾಜಿ ಸೈನಿಕರಿಗೆ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಇತರರಿಗೆ ಕನಿಷ್ಠ 18 ವರ್ಷ ದಿಂದ ಗರಿಷ್ಠ 30 ವರ್ಷ.
ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1750/-ಗಳ ಮಾಸಿಕ ಶಿಷ್ಯವೇತನ (ಮಾಜಿ ಸೈನಿಕರನ್ನು ಹೊರತುಪಡಿಸಿ)ವನ್ನು ನೀಡಲಾಗುವುದು. ಶಿಷ್ಯವೇತನ/Stipend ವನ್ನು ಅಭ್ಯರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಈ ಕೆಳಕಂಡ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

1) ಶ್ರೀ ಗೋಪಾಲ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 8660733025

2) ಶ್ರೀ ಶಿವಕುಮಾರ್, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 9844229157 ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಉಪನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.