ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:3400 ದಂಡ ಸಂಗ್ರಹ

ವಿಜಯ ದರ್ಪಣ ನ್ಯೂಸ್…

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:3400 ದಂಡ ಸಂಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 11: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್ 4 ರ ಅಡಿಯಲ್ಲಿ 19 ಪ್ರಕರಣಗಳನ್ನು ದಾಖಲಿಸಿ 3400 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ದೊಡ್ಡ ತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಮಂಜುವಾಣಿ, ಪೋಲಿಸ್ ಇಲಾಖೆಯ ಎ.ಎಸ್.ಐ ವೆಂಕಟೇಶ್, ಕಾನ್ಸ್ಟೇಬಲ್ ವೆಂಕಟೇಶ್, ಶುಶೂಷ್ರಕಿ ಶರಣಮ್ಮ ಉಪಸ್ಥಿತರಿದ್ದರು.

#################################

ಬ್ಯೂಟಿ ಪಾರ್ಲರ್‌ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 11 :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಬ್ಯೂಟಿ ಪಾರ್ಲರ್ ಉಚಿತ ತರಬೇತಿಯು 15 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ 18 ರಿಂದ 45 ರ್ಷಂ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.