ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್ ..

ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2024ರ ಜೂನ್ 18 ರಿಂದ ಪ್ರಾರಂಭವಾಗಿ ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.

*ಷರತ್ತುಗಳು*

1. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು.

2. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

3. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು.

4. ವಾರ್ಷಿಕ ಆದಾಯ ರೂ.2,00,000/-ಗಳ ಒಳಗೊಂಡಿರಬೇಕು.

5. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು,ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು.

6. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ನಿಯೋಜಿಸಲಾಗುವುದು.

7. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೋದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯ ವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ.

8. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

9. ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

10. ಆಯ್ಕೆ ಸಮಿತಿಯ ತಿರ್ಮಾನವೇ ಅಂತಿಮ ತೀರ್ಮಾನ ವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ;080 29787447 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

##################################

ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12(ಕರ್ನಾಟಕ : 2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಛೇರಿಯ ಅಧಿಕೃತ ಜಾಲತಾಣ: https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ಜೂನ್ 30 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 01.04.2023 ರಿಂದ 31.03.2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000 ರೂ ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.