ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್



ವಿಜಯ ದರ್ಪಣ ನ್ಯೂಸ್ …

ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 14 :- ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ/ಗೋವುಗಳ ಹತ್ಯೆ ಮಾಡುವದು ಅಪರಾಧವಾಗಿದ್ದು, ಈ ಬಗ್ಗೆ ಸರ್ಕಾರದ ಕಾನೂನು ಜಾರಿಯಲ್ಲಿರುತ್ತದೆ. ಆದ್ದರಿಂದ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು. ಹಬ್ಬದ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುವುದು ಅಪರಾಧವಾಗಿರುತ್ತದೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು 

ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.

ಕಾನೂನು ಬಾಹಿರವಾಗಿ ಯಾರಾದರೂ ಒಂಟೆ/ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ, ಪೊಲೀಸ್ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳಿಗೆ ಮಾಹಿತಿಯನ್ನು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.