ಫಕೀರಪ್ಪ ಗುರುಬಸಪ್ಪ ಹಳ್ಳಕಟ್ಟಿ ಜಯಂತಿ ಆಚರಣೆ 

ವಿಜಯ ದರ್ಪಣ ನ್ಯೂಸ್…

ಫಕೀರಪ್ಪ ಗುರುಬಸಪ್ಪ ಹಳ್ಳಕಟ್ಟಿ ಜಯಂತಿ ಆಚರಣೆ 

ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕನ್ನಡದ ಕಣ್ವ ಆಚಾರ್ಯ ಬಿ.ಎಂ.ಶ್ರೀಕಂಠಯ್ಯನವರು ಆ ವಚನ ಗುಮ್ಮಟವೇ ವಚನ ಪಿತಾಮಹರೆಂದು ಖ್ಯಾತನಾಮರಾದ ರಾವಬಹದ್ಧೂರ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅಖಿಲ ಕರ್ನಾಟಕ ಮಿತ್ರ ಸಂಘದ ಚಿ.ಮಾ ಸುಧಾಕರ್ ತಿಳಿಸಿದರು.

ವಿಜಯಪುರ ಪಟ್ಟಣದ ಅಖಿಲ ಕರ್ನಾಟಕ ಮಿತ್ರ ಸಂಘದ ಆಶ್ರಯದಲ್ಲಿ ಫ.ಗು.ಹಳಕಟ್ಟಿ ಜಯಂತಿಯನ್ನು ಏರ್ಪಡಿಸಲಾಗಿತ್ತು. ಫ.ಗು.ಹಳಕಟ್ಟಿ ಅವರು ಹುಟ್ಟಿದ್ದು 1880ರ ಜುಲೈ 2 ರಂದು ಧಾರವಾಡದಲ್ಲಿ. ತಂದೆ ಗುರುಬಸಪ್ಪ ಹಳಕಟ್ಟಿ ತಾಯಿ ದಾನಾದೇವಿ. ಹಳಕಟ್ಟಿ ಎಂಬುದು ಇವರ ಮನೆತನದ ಹೆಸರು. ತಂದೆ ಗುರುಬಸಪ್ಪ ವೃತ್ತಿಯಲ್ಲಿ ಶಿಕ್ಷಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಗಳಾಗಿದ್ದರು.

1901ರಲ್ಲಿ ಬಿ.ಎ. ಪದವಿ ಪಡೆದ ಹಳಕಟ್ಟಿಯವರು 1904ರಲ್ಲಿ ಕಾನೂನು ಪದವೀಧರರಾಗಿ ಬೆಳಗಾವಿಯಲ್ಲಿ ವಕೀಲಿವೃತ್ತಿ ಪ್ರಾರಂಭಿಸಿದರು.

ಮುಖ್ಯ ಅತಿಥಿಗಳಾಗಿ ಆರ್ ಮುನಿರಾಜು ಮಾತನಾಡುತ್ತಾ ಕನ್ನಡವನ್ನು ಉಸಿರಾಗಿಸಿಕೊಂಡಿದ್ದಷ್ಟೇ ವಚನ ಸಾಹಿತ್ಯಕ್ಕೆ ಮಾರುಹೋಗಿದ್ದ ಹಳಕಟ್ಟಿಯವರು ಅಂದು ವಚನಸಾಹಿತ್ಯದ ಹಸ್ತಪ್ರತಿಗಳಿಗಾಗಿ, ಓಲೆಗರಿ ಗ್ರಂಥಗಳಿಗಾಗಿ ಹುಡುಕಾಡದ ಊರುಗಳಿಲ್ಲ, ತಡಕಾಡದ ಕೇರಿಗಳಿಲ್ಲ, 1925ರಲ್ಲಿ ತಮ್ಮ ಸ್ವಂತಮನೆ ಮಾರಿ “ಹಿತಚಿಂತಕ ಮುದ್ರಣಾಲಯ”ವನ್ನು ಪ್ರಾರಂಭಿಸಿದರು.

ಹಳಕಟ್ಟಿಯವರು ತಾಳೆಯೋಲೆಗಳನ್ನು ಸಂಗ್ರಹಿಸುವುದಕ್ಕೆ ಮೊದಲು ಕವಿ ಚರಿತೆಕಾರರು ಗುರುತಿಸಿದ್ದು ಕೇವಲ 50 ವಚನಕಾರರನ್ನು ಮಾತ್ರ. ಫ. ಗು. ಹಳಕಟ್ಟಿಯವರು ತಮ್ಮ ಸಂಶೋಧನೆಯ ಮೂಲಕ 250 ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು.

ಸಂಘದ ಉಪಾಧ್ಯಕ್ಷ  ವಿಶ್ವನಾಥ್ ರವರು ಮಾತನಾಡುತ್ತಾ ಪತ್ರಿಕೋದ್ಯಮದಲ್ಲೂ ಬಹಳ ಆಸಕ್ತಿ ಹೊಂದಿದ್ದ ಹಳಕಟ್ಟಿಯವರು 1926ರಲ್ಲಿ ಮೀಸಲಾದ ‘ಶಿವಾನುಭವ’ ಪತ್ರಿಕೆ ಪ್ರಾರಂಭಿಸಿದರು. ಇದನ್ನು ಸತತವಾಗಿ ನಡೆಸಿಕೊಂಡು ಬಂದ ಇವರು 1951ರಲ್ಲಿ ಇದರ ಬೆಳ್ಳಿಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು.

ಹಾಗೆಯೇ 1927ರಲ್ಲಿ ‘ನವ ಕರ್ನಾಟಕ’ ಎಂಬ ವಾರಪತ್ರಿಕೆಯನ್ನೂ ಸಹ ಆರಂಭಿಸಿದ್ದರು. ಈ ಎರಡೂ ಪತ್ರಿಕೆಗಳ ಸಂಪಾದಕ ಮತ್ತು ಪ್ರಕಾಶಕ ಹಾಗೂ ಮುದ್ರಕರಾಗಿ ಹಳಕಟ್ಟಿಯವರ ಪತ್ರಿಕಾರಂಗದ ಸಾಧನೆ ಕೂಡ ಗುರುತರವಾದದ್ದು ಎಂದು ತಿಳಿಸಿದರು

ಶಾಲಾ ಮುಖ್ಯೋಪಾಧ್ಯರಾದ ಮುನಿಪಾಪು ಮಾತನಾಡುತ್ತಾ 1920ರಲ್ಲಿ ಮುಂಬಯಿಯ ವಿಧಾನ ಪರಿಷತ್ತಿನ ಸದಸ್ಯತ್ವ, 1926ರಲ್ಲಿ ಬಳ್ಳಾರಿಯಲ್ಲಿ ನಡೆದ 12ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, 1928ರಲ್ಲಿ ಜರುಗಿದ 3ನೇ ಕರ್ನಾಟಕ ಏಕೀಕರಣ ಪರಿಷತ್ತಿನ ಅಧ್ಯಕ್ಷತೆ, 1931ರಲ್ಲಿ ಮುಂಬೈ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯತ್ವ, 1933ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷತೆ, 1956ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಮುಂತಾದವು ಇವರ ಸೇವೆಗೆ ಸಂದ ಗೌರವ ಪುರಸ್ಕಾರಗಳು ಎಂದರು 

 ಶಿಕ್ಷಕಿಯಾದ ಶೋಭಾ ಪ್ರಸನ್ನ ಕುಮಾರಿ, ನಾಗವೇಣಿ ರವರು ಉಪಸ್ಥಿತರಿದ್ದರು.