ವಿಜಯ ದರ್ಪಣ ನ್ಯೂಸ್…
ವಿಶ್ವ ಝೂನೋಸಿಸ್ ದಿನ ಆಚರಣೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ “ವಿಶ್ವ ಝೂನೋಸಿಸ್ ದಿನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಣೆ ಮಾಡಲಾಯಿತು.
1885 ರ ಜುಲೈ 06 ರಂದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಟಿಕ್ ಕಾಯಿಲೆಯಾದ ರೇಬಿಸ್ ರೋಗಕ್ಕೆ ಮೊದಲು ಲಸಿಕೆಯನ್ನು ಸರ್.ಲೂಯಿಸ್ ಪಾಶ್ಚರ್ ರವರು ಯಶಸ್ವಿಯಾಗಿ ನೀಡಿದ ಸಂದರ್ಭದ ಸ್ಮರಣಾರ್ಥಕವಾಗಿ ಈ ದಿನವನ್ನು ಆಚರಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಪಂ ಉಪ ಕಾರ್ಯದರ್ಶಿ ಟಿ.ಕೆ ರಮೇಶ್,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಹೇಮಾವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
&&&&&&&&&&&&&&&&&&&&&&&&&&
ಕಲಾವಿದರ ಮಾಸಾಶನಕ್ಕೆ ಅರ್ಜಿ ಅಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06 :- ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ನಾಡು -ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು ರೂ.2,000/- ಗಳ ಮಾಸಾಶನವನ್ನು ನೀಡುವ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿರುತ್ತದೆ. ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶಗಳಿದ್ದು, ಅರ್ಹರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು, ಅರ್ಜಿದಾರರು 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರಬೇಕು, ಅರ್ಜಿದಾರರು ಸರ್ಕಾರದ ಯಾವುದೇ ಇತರೇ ಇಲಾಖೆಯ ಯೋಜನೆಗಳ ಫಲಾನುಭವಿಗಳಾಗಿರಬಾರದು, ಅರ್ಜಿದಾರರ ವಾರ್ಷಿಕ ಆದಾಯ ರೂ.1.00 ಲಕ್ಷದ ಮಿತಿಯಲ್ಲಿರಬೇಕು.
ಅಸಕ್ತ ಅರ್ಹ ಕಲಾವಿದರು / ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ ಇಲ್ಲಿಗೆ ಭೇಟಿ ನೀಡಿ ಅರ್ಜಿ / ಮಾಹಿತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.