ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯಾಗಲು ಆರ್ಥಿಕ ಬಲ ಬೇಕು: ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್

ವಿಜಯ ದರ್ಪಣ ನ್ಯೂಸ್…

ಚನ್ನರಾಯಪಟ್ಟಣ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15: ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮ ಸಂಪನ್ಮೂಲ ಕ್ರೋಡೀಕರಣ ಮಾಡಿದರೆ ಅಭಿವೃದ್ಧಿ ಮಾಡಲು ಆರ್ಥಿಕ ಬಲ ದೊರೆಯುತ್ತದೆ ಎಂದು ಬಯಪ್ಪ ಅಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್ ತಿಳಿಸಿದರು.

ಅವರು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಕೇಂದ್ರದಲ್ಲಿ ಸೋಮವಾರ  ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ವಾಣಿಜ್ಯ ಅಂಗಡಿ ಮಳಿಗೆ ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಾಯಿತಿ ಅನುದಾನದಲ್ಲಿ 22.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಿಂದ ಮಾಸಿಕವಾಗಿ ಬರುವ ಬಾಡಿಗೆ ಪಂಚಾಯಿತಿ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ರಾಜಣ್ಣ ಮಾತನಾಡಿ, ಇಡೀ ಜಿಲ್ಲೆಯಲ್ಲೇ ಉದ್ಯೋಗ ಖಾತರಿ ಯೋಜನೆ (ನರೇಗಾ) ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಜಾರಿಯಾಗಿದೆ ಎಂದರು.

ಕೆರೆಗೆ ನೀರು ಹರಿಸಿರುವ ಪರಿಣಾಮವಾಗಿ ಅಂತರ್ಜಲ ಹೆಚ್ಚಾಗಿ ಕೊಳವೆ ಬಾವಿಗಳಲ್ಲಿ ನೀರು ಜಾಸ್ತಿಯಾಗಿದ್ದು, ಕೃಷಿ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ರೈತರಿಗೆ ಸಹಕಾರಿಯಾಗಿದೆ ಎಂದರು.

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾರೇಗೌಡ ಮಾತನಾಡಿ, ಈ ಹಿಂದೆ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಸಂಪನ್ಮೂಲ ಕೊರತೆ ಇತ್ತು, ಸಾಕಷ್ಟು ಜನ ಚುನಾಯಿತ ಸದಸ್ಯರು ಅಭಿವೃದ್ಧಿ ಪರ ಚಿಂತನೆ ಯಿಂದಾಗಿ ಪ್ರಸ್ತುತ ಪಂಚಾಯಿತಿಗೆ ವರಮಾನ ದೊರೆಯುತ್ತಿದೆ ಎಂದರು.

ಬಯಪ್ಪ ಪ್ರಾಧಿಕಾರದದಿಂದ ಸ್ತ್ರೀ ಶಕ್ತಿ ಭವನ ಸೇರಿದಂತೆ ಸಾರ್ವಜನಿಕರಿಗೆ ಉಪಯೋಗಿ ಭವನಗಳ ನಿರ್ಮಾಣಕ್ಕೆ ಸಹಾಯಧನ ನೀಡಿದರೆ ಸ್ಥಳೀಯರಿಗೆ ಅನುಕೂಲವಾಗಲಿದ್ದು, ಪರಿಶೀಲಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ದಿನ್ನೂರು ವೆಂಕಟೇಶ್, ಜೆಡಿಎಸ್ ಹೋಬಳಿ ಅಧ್ಯಕ್ಷ ಮುನಿರಾಜು, ಗ್ರಾಪಂ ಉಪಾಧ್ಯಕ್ಷೆ ರತ್ನಮ್ಮ, ಗ್ರಾಪಂ ಸದಸ್ಯರಾದ ಮಂಜುನಾಥ್, ದೀಪಾ, ಮಂಜುನಾಥ್ ಬಿ.ಕೆ. ಮುನಿಲಕ್ಷ್ಮಮ್ಮ, ಚಂದ್ರಕಲಾ, ಚನ್ನಕೇಶವ, ಗೌರಮ್ಮ, ಲಕ್ಷ್ಮಮ್ಮ, ಶಿವಕುಮಾರ್, ಶಿಲ್ಪಾ, ಶಾಂತಮ್ಮ, ರಾಜಾನಂದಗೌಡ, ಲಕ್ಷ್ಮೀ, ಪಿಡಿಒ ಸಿ.ಮುನಿರಾಜು ಇದ್ದರು.