ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…

ದೇವನಹಳ್ಳಿಯಲ್ಲಿ ತಾಲ್ಲೂಕು ಸಾರ್ವಜನಿಕ ಕುಂದು ಕೊರತೆ ಸಭೆ

77 ಅಹವಾಲು ಸ್ವೀಕಾರ

ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20 :- ಸಾರ್ವಜನಿಕರು ಜನಸ್ಪಂದನ ಸಭೆಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಶೀಘ್ರ ಬಗೆಹರಿಸಲಾಗುವುದು  ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಜೆಗಳ ಸೇವೆ ಮಾಡುವ ದೃಷ್ಟಿಯಿಂದ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರು ಸಮಸ್ಯೆಗಳನ್ನು ಹೊತ್ತು ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಜನರ ಬಳಿಗೆ ಸರ್ಕಾರವನ್ನು ಕಳುಹಿಸಿ ಪ್ರಜೆಗಳ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಸ್ಥಳದಲ್ಲಿಯೇ ಪರಿಹರಿಸುವ ಸಲುವಾಗಿ ನಿಟ್ಟಿನಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಸಭೆ ಸಹಕಾರಿಯಾಗಲಿದೆ. ಸಾರ್ವಜನಿಕರು ಸಲ್ಲಿಸಿರುವ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ವಿಳಂಬ ಮಾಡದೆ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರ ಇತ್ಯರ್ಥ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪೋಡಿ ಕಾರ್ಯ, ಒತ್ತುವರಿ ತೆರವು, ಸ್ಮಶಾನ ಭೂಮಿ ಅಭಿವೃದ್ಧಿ, ಹಕ್ಕು ಪತ್ರ ವಿತರಣೆ ,ಸಾಗುವಳಿ ಚೀಟಿ ವಿತರಣೆ, ಜಮೀನು ಸರ್ವೇಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಮಯ ನಿಗದಿ ಪಡಿಸಿ ಸಮಸ್ಯೆ ಬಗೆಹರಿಸಲಾಗುವುದು. ನಿವೇಶನ ರಹಿತ, ವಸತಿ ರಹಿತರಿಗೆ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.

77 ಅರ್ಜಿ ಸ್ವೀಕಾರ

ಸರ್ಕಾರಿ ಜಾಗ ಒತ್ತುವರಿ, ಪೋಡಿ ಪ್ರಕರಣ, ಜಮೀನು ತಕರಾರು, ಜಮೀನು ಸರ್ವೆ ಕಾರ್ಯ, ಸ್ಮಶಾನ ಜಾಗ ಹಾಗೂ ರಸ್ತೆ ವ್ಯವಸ್ಥೆ, ಗೋಮಾಳ ಒತ್ತುವರಿ, ಹಕ್ಕು ಪತ್ರ ಹಂಚಿಕೆ, ಕೊಳವೆ ಬಾವಿ ಹಂಚಿಕೆ, ನಿವೇಶನ ಹಂಚಿಕೆ, ಚರಂಡಿ ನಿರ್ಮಾಣ ಮುಂತಾದ ಇತರೆ ಮೂಲಭೂತ ಸಮಸ್ಯೆಗಳು, ಸೇರಿದಂತೆ ಒಟ್ಟು 77 ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.

ಸಭೆಯಲ್ಲಿ ಬಯಪ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಎನ್, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

&&&&&&&&&&&&&&&&&&&&&&&&&&₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹

ಮೀನುಗಾರಿಕೆ ಇಲಾಖೆಯ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜುಲೈ 20 :- ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಿಂದ ಕೇಂದ್ರ ಪುರಸ್ಕೃತ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
2020-21, 2021-22, 2022-23 ಮತ್ತು 2023-24 ನೇ ಸಾಲಿನಲ್ಲಿ ಉಳಿಕೆಯಾಗಿರುವ ಗುರಿಗಳಿಗೆ 2024-25ನೇ ಸಾಲಿನ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಮಧ್ಯಮ ಗಾತ್ರದ ಆರ್.ಎ.ಎಸ್, 0.1 ಹೆಕ್ಟರ್ ಬಯೋಫ್ಲಾಕ್ ಘಟಕಗಳಿಗೆ, ಶೈತ್ಯಾಗಾರ/ ಮಂಜುಗಡ್ಡೆ, ಸ್ಥಾವರ ನಿರ್ಮಾಣ, ಐಸ್ ಪೆಟ್ಟಿಗೆಯೊಂದಿಗೆ ಮೋಟರ್ ಸೈಕಲ್, ಮೀನು/ ಅಕ್ವೇರಿಯಂ ಕಿಯೋಸ್ಕಗಳ ಸ್ಥಾಪನೆ ಮತ್ತು ಇತರೆ ಯೋಜನೆಗಳನ್ನು ಅನುಷ್ಠಾನಗೂಳಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 40 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 60 ರಷ್ಟು ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 05 ಕೊನೆಯ ದಿನವಾಗಿದೆ.

2024-25ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ ವಲಯ/ರಾಜ್ಯ ವಲಯ / ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಖರೀದಿ, ಮೀನು ಮರಿ ಖರೀದಿಗೆ ಹಾಗು ಇತ್ಯಾದಿ ಯೋಜನೆಗಳಿಗೆ ಸಹಾಯಧನ ಪಡೆಯಲು ಅಸಕ್ತ ಒಳನಾಡು ಮೀನುಗಾರರು/ ಮೀನು ಕೃಷಿಕರು ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ರವರ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಿ, ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಜಿಲ್ಲಾ ಕಛೇರಿ ಹಾಗೂ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ರವರುಗಳನ್ನು ಸಂಪರ್ಕಿಸುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೀನುಗಾರಿಕೆ ಉಪನಿರ್ದೇಶಕರು ದೂ.ಸಂ-080-23362555/ 9972189781,                                        ದೇವನಹಳ್ಳಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-9448500385,                      ದೊಡ್ಡಬಳ್ಳಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-9945189390,                          ಹೊಸಕೋಟೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-9845180161,                          ನೆಲಮಂಗಲ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-8747012127 ಇವರನ್ನು ಸಂಪರ್ಕಿಸಬಹುದೆಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.