ಕೇಂದ್ರ ಬಜೆಟ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…

ಕೇಂದ್ರ ಬಜೆಟ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕೇಂದ್ರದ ಎನ್‌ಡಿಎ ಸರ್ಕಾರವು ಆಯವ್ಯಯ ಮಂಡನೆಯಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ನೀಡದೆ ಮಿತ್ರ ಪಕ್ಷದ ರಾಜ್ಯಗಳಾದ ಬಿಹಾರ, ಆಂಧ್ರಪ್ರದೇಶ, ಗುಜರಾತ್ ಹಾಗೂ ಇನ್ನಿತರೆ ರಾಜ್ಯಗಳಿಗೆ ಬಜೆಟ್‌ನಲ್ಲಿ ಸಿಂಹಪಾಲು ಅನುದಾನ ಕಲ್ಪಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ನೇತೃತ್ವದಲ್ಲಿ ಚೊಂಬನ್ನು ಪ್ರದರ್ಶಿಸುವ ಮೂಲಕ ಏಡುಕೊಂಡ ಲವಾಡ ಗೋವಿಂದ ಗೋವಿಂದ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇವನಹಳ್ಳಿ ನಗರ ಬಿ.ಬಿ.ರಸ್ತೆಯಲ್ಲಿ ಪಾದಯಾತ್ರೆ ಮುಖಾಂತರ ಪ್ರವಾಸಿ ಮಂದಿರದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಹಣಕಾಸು ಸಚಿವೆ ರಾಜ್ಯದಿಂದ ಆಯ್ಕೆ ಆಗಿದ್ದರೂ, ಇಂಡಿಯಾ ಒಕ್ಕೂಟಕ್ಕೆ ಸೇರಿದ ರಾಜ್ಯಗಳಿಗೆ ಅನ್ಯಾಯ ಮಾಡಿದ್ದಾರೆ. ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಮಾತ್ರ ಹೆಚ್ಚಿನ ಅನುದಾನ ನೀಡಿದ್ದಾರೆ.

ಮಹಾರಾಷ್ಟ್ರ ಬಿಟ್ಟರೆ ಜಿಎಸ್‌ಟಿ ಹೆಚ್ಚಾಗಿ ಕಟ್ಟುವುದು ಕರ್ನಾಟಕ ಎರಡನೇ ಸ್ಥಾನದಲ್ಲಿದೆ. 2004ರಿಂದ 2014ರ ವರೆಗೆ ಯುಪಿಎ ಸರಕಾರ ಅಧಿಕಾರದಲ್ಲಿತ್ತು, ಆಗಯಾವುದೇ ರಾಜ್ಯಕ್ಕೆ ಅನ್ಯಾಯ ಮಾಡಿಲ್ಲ.ಮೋದಿ ಪ್ರಧಾನಿ ಆದ ಮೇಲೆ ಎಲ್ಲ ರಾಜ್ಯಗಳ ಮೇಲೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಸಿದರು.

ಕರ್ನಾಟಕದ ಅಭಿವೃದ್ಧಿಗೆ ಹಣವನ್ನು ನೀಡುತ್ತಿಲ್ಲ. ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಕರ್ನಾಟಕದ ಮೂಲೆ ಮೂಲೆಯಲ್ಲಿಯೂ ಪ್ರತಿಭಟನೆ ಮಾಡಬೇಕು ಎಂದುಕೊಂಡಿದ್ದೆವು, ಅದಕ್ಕೆ ಕೋರ್ಟ್ ಅನುಮತಿ ನೀಡಿಲ್ಲ ಎಂದು ಕೆಂದ್ರ ಬಜೆಟ್ ವಿಚಾರವಾಗಿ ಕೇಂದ್ರದ ವಿರುದ್ಧ ಹರಿಹಾಯ್ದರು.

ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ ಆರ್.ಗೌಡ, ತಾಲೂಕು ಕಾಂಗ್ರಸ್ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಜಗನ್ನಾಥ, ತೂಬಗರೆ ಬ್ಲಾಕ್ ಅಧ್ಯಕ್ಷ ರಂಗಪ್ಪ, ಪುರಸಭಾ ಸದಸ್ಯರಾದ ವೇಣುಗೋಪಾಲ್, ಬಾಲರಾಜು, ಮುನಿರಾಜು(ಬರ್ಮಾ), ಸಿ.ಎಂ.ರಮೇಶ್ ಉಪಸ್ಥಿತರಿದ್ದರು.