ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ

ವಿಜಯ ದರ್ಪಣ ನ್ಯೂಸ್…

ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 01 ರಿಂದ 07 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ 2024′ ರ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ.


ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬದು ಈ ವರ್ಷದ ಘೋಷ ವಾಕ್ಯ ವಾಗಿದ್ದು ಇದರ ಅಂಗವಾಗಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ವಿಶ್ವ ಸ್ತನ್ಯಪಾನ ಸಪ್ತಾಹ-2024 ರ ಪೋಸ್ಟರ್ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿ ಮಗು ಜನಿಸಿದ ಒಂದು ಗಂಟೆಯ ಒಳಗೆ ತಾಯಿಯ ಎದೆ ಹಾಲು ಮಗುವಿಗೆ ಕುಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಎದೆ ಹಾಲುಣಿಸುವುದರಿಂದ ಮಗುವಿನ ಆರೋಗ್ಯ ಹಾಗೂ ತಾಯಿಯ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

&&&&&&&&&&&&&&&&&&&&&&&&&&

ಆಗಸ್ಟ್ 02 ರಿಂದ 12 ರ ವರೆಗೆ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 02 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಅಂತರ್ ಜಿಲ್ಲಾ, ವಿಭಾಗದೊಳಗಿನ ವರ್ಗಾವಣೆಯು ಆಗಸ್ಟ್ 02, 03 ಮತ್ತು 05 ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಾಗೂ ಆಗಸ್ಟ್ 6,7,8 ರಂದು ಪ್ರೌಢ ಶಾಲೆ ಶಿಕ್ಷಕರಿಗೆ ಹಾಗೂ ಆಗಸ್ಟ್ 12 ರಂದು ಪರಸ್ಪರ ವರ್ಗಾವಣೆಯ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 113, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದ್ದು ಆದ್ಯತಾ ಪಟ್ಟಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು ಆದ್ಯತೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ ವಾರು ಕೌನ್ಸಿಲಿಂಗ್ ನಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.