ಆಗಸ್ಟ್  5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್…

ಆಗಸ್ಟ್  5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಆಗಸ್ಟ್ 03  :- ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿಯವರು 2023 ರ ನವೆಂಬರ್ 02 ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಚಾಲನೆ ನೀಡಿದ್ದಾರೆ.

ಈ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಸ್ಟ್ 05(ಸೋಮವಾರ ರಂದು ಬೆಳಿಗ್ಗೆ 09:00 ಗಂಟೆಗೆ ಕೋಲಾರದ ಮಾಲೂರಿನಿಂದ ಹೊಸಕೋಟೆಗೆ ರಥಯಾತ್ರೆ ಆಗಮಿಸಲಿದೆ, ಆಗಸ್ಟ್ 06 ಮಂಗಳವಾರ ರಂದು ಬೆಳಿಗ್ಗೆ 09:00 ಗಂಟೆಗೆ ಹೊಸಕೋಟೆಯಿಂದ ದೇವನಹಳ್ಳಿಗೆ, ಆಗಸ್ಟ್ 07 ಬುಧವಾರ ರಂದು ಬೆಳಿಗ್ಗೆ 09:00 ಗಂಟೆಗೆ ದೇವನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ, ಆಗಸ್ಟ್ 08 ಗುರುವಾರ ರಂದು ಬೆಳಿಗ್ಗೆ 09:00 ಗಂಟೆಗೆ ದೊಡ್ಡಬಳ್ಳಾಪುರದಿಂದ ನೆಲಮಂಗಲಕ್ಕೆ ಸಂಚರಿಸಲಿದೆ.
ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಕನ್ನಡ ರಥಯಾತ್ರೆ ಸಂಚರಿಸಲಿದ್ದು ರಥಯಾತ್ರೆಯು ಜಿಲ್ಲೆಗೆ ಆಗಮಿಸುವ ದಿನದಿಂದ, ಜಿಲ್ಲೆಯಿಂದ ಬೀಳ್ಕೊಡುವ ದಿನಾಂಕದ ಸಮಯಗಳಲ್ಲಿ ಆಯಾ ಗ್ರಾಮ / ಗ್ರಾಮ ಪಂಚಾಯತಿ / ತಾಲ್ಲೂಕು ಕೇಂದ್ರಗಳಲ್ಲಿ ರಥಯಾತ್ರೆಯನ್ನು ಗೌರವಯುತವಾಗಿ ಸ್ವಾಗತಿಸಲಾಗುತ್ತದೆ.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆಯೋಜಿಸಲಾಗುವ ಮೆರವಣಿಗೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಕನ್ನಡಪರ ಸಂಘಟನೆಗಳ ಎಲ್ಲಾ ಅಧ್ಯಕ್ಷರುಗಳು ಎಲ್ಲಾ ಪದಾಧಿಕಾರಿಗಳು, ಸಾಹಿತಿಗಳು, ಕಲಾವಿದರು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವಿದೇಶ ವ್ಯಾಸಂಗಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03,2024 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:-ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಲ್, ಹಾಗೂ ಫಾರ್ಸಿ, ಜನಾಂಗಕ್ಕೆ ಸೇರಿದವರಾಗಿರಬೇಕು.), ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ 60% ಅಂಕವನ್ನು ಪಡೆದಿರಬೇಕು, ವಿದೇಶ ವಿಶ್ವವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿರಬೇಕು, ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ), ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣ ಪತ್ರ, 10ನೇ ತರಗತಿಯ ಅಂಕಪಟ್ಟಿ ಮತ್ತು 12ನೇ ತರಗತಿಯ ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ವರ್ಗಾವಣೆ ಪ್ರಮಾಣ ಪತ್ರ, ಪ್ರಸ್ತುತ ಅಧ್ಯಯನ ಪ್ರಮಾಣ ಪತ್ರ, ಕಾಲೇಜು ಶುಲ್ಕ ರಚನೆ, ಪಾಸ್ಪೋರ್ಟ್ ನಕಲು, ವೀಸಾ ನಕಲು, ಮಾರಾಟದ ಪತ್ರಗಳು ಮತ್ತು ತಾಯಿಯ ಪತ್ರ, ಖಾತಾ ಸಾರ ಮತ್ತು ಖಾತಾ ಪ್ರಮಾಣ ಪತ್ರ ಅಥವಾ ರೂಪಾಂತರ, ನಮೂನೆ ನಂ.15 ರಲ್ಲಿ ನಿಲ್ ಎನ್ಕಂಬರೆನ್ಸ್ ಪ್ರಮಾಣ ಪತ್ರ, ನವೀಕೃತ ತೆರಿಗೆ ಪಾವತಿಸಿದ ರಶೀದಿ, ಸೂಕ್ತ ಪ್ರಾಧಿಕಾರದಿಂದ ಮಾರ್ಗದರ್ಶನ ದರ, ಜಿಲ್ಲಾ ವ್ಯವಸ್ಥಾಪಕರಿಂದ ಆಸ್ತಿಯ ಸ್ಥಳ ಪರಶೀಲನೆ ವರದಿ, ನೋಂದಾಯಿತ ಮೌಲ್ಯಮಾಪಕರಿಂದ ಮೌಲ್ಯಮಾಪನ ವರದಿ, ಫಲಾನುಭವಿಯ ಪ್ರಮಾಣ ಪತ್ರ, ಫಲಾನುಭವಿ ಮತ್ತು ಜಾಮೀನುದಾರರ ಜಂಟಿ ಪ್ರಮಾಣ ಪತ್ರ, ಪ್ರಾಮಿಸರಿ ನೋಟ್ ಜೊತೆಗೆ ಡಿ ಪಿ ನೋಟ್ ಡೆಲಿವರಿ ಲೆಟರ್ ಈ ದಾಖಲೆಗಳು ಅರ್ಜಿ ಸಲ್ಲಿಸಲು ಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯ ಪ್ರತಿ ಹಾಗೂ ಆಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಬೇಕಾದ ಕಛೇರಿ ವಿಳಾಸ:- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ: 080-27681786/Gmail:kmdcbrural@gmail.com ಇಲ್ಲಿ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೈಕ್ ರಿಪೇರಿ ಮತ್ತು ಸೇವೆ ಉಚಿತ ತರಬೇತಿ‌

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 03, 2024 :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್‌ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್‌ 15 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ಜತೆಗೆ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9380162042, 9740982585
ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.