ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸ್ವ-ಸಹಾಯ ಸಂಘಗಳು ಸಹಕಾರಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್ 

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸ್ವ-ಸಹಾಯ ಸಂಘಗಳು ಸಹಕಾರಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 13, 2024 :- ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ-ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಇದರ ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಡೇ.ಎನ್.ಎಲ್.ಆರ್.ಎಮ್ ರವರ ಸ್ವಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಅವಶ್ಯಕತೆ ಇರುತ್ತದೆ. ಇದರ ಭಾಗವಾಗಿ ಸರ್ಕಾರವು ಕೂಡ ಬೆಂಬಲ ನೀಡಿ ಮೇಳಗಳು ಆಯೋಜಿಸಿ ಮಹಿಳೆಯರು ತಯಾರಿಸಿದ ವಿವಿಧ ಬಗೆಯ ತಿಂಡಿ ತಿನಿಸುಗಳು, ಕರಕುಶಲ ವಸ್ತುಗಳು, ಸೀರೆ-ಬಟ್ಟೆ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮೇಳಗಳು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಮಾತನಾಡಿ ಡೇ.ಎನ್.ಎಲ್.ಆರ್.ಎಮ್ ಯೋಜನೆಯಡಿ ಸೌಲಭ್ಯ ಪಡೆದುಕೊಂಡು ಮಹಿಳೆಯರು ಉದ್ಯಮರಂಗದಲ್ಲಿ ಅಭಿವೃದ್ಧಿ ಸಾಧಿಸಲು ಉತ್ತಮ ವೇದಿಕೆಯಾಗಿದೆ. ಈ ಮಾರಾಟ ಮೇಳವು ಆಗಸ್ಟ್ 14ರ ಸಂಜೆ 06:00 ಗಂಟೆಯವರೆಗೆ ಇರಲಿದ್ದು, ಸಾರ್ವಜನಿಕರು ಭಾಗವಹಿಸಿ ಉತ್ಪನ್ನಗಳನ್ನು ಖರೀದಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವ-ಸಹಾಯ ಗುಂಪುಗಳ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

@@@@@@@@@@@@@@@@@@@@@

ಡಿಪ್ಲೊಮಾ ಕೋಸ್೯ಗಳ ಉಳಿಕೆ ಸೀಟುಗಳ ಭರ್ತಿಗಾಗಿ ಅರ್ಜಿ ಆಹ್ವಾನ: ಆಗಸ್ಟ್ 31 ಕೊನೆ ದಿನ

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಆಗಸ್ಟ್ 13,2024  :- ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಭೇತಿ ಕೇಂದ್ರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ದೇವನಹಳ್ಳಿ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ಗಳ ದಾಖಲಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ, ಸಂಬಂಧಿಸಿದಂತೆ. ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ನಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಿಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳಿಗೆ ಈ ಕೋರ್ಸ್ ಗಳಿಗೆ ಎಸ್. ಎಸ್. ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾ ತರಬೇತಿಗಳಿಗೆ ದಾಖಲಾತಿ ಪಡೆಯಬಹುದಾಗಿದೆ. ಈ ಡಿಪ್ಲೋಮಾ ಕೋರ್ಸ್ಗಳ ಅವಧಿ 3+1. ಈ ಕೋರ್ಸ್ ಗಳು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ್ದಾಗಿದ್ದು, ಶೇ. 30% ಥಿಯರಿ, ಶೇ. 70% ಪ್ರಾಕ್ಟಿಕಲ್ ಹೊಂದಿರುವ ಕೋರ್ಸ್ ಗಳಾಗಿವೆ. ಈ ಕೋರ್ಸ್ ಅಧ್ಯಯನ ಮಾಡುವಾಗ 3 ವರ್ಷ ಡಿಪ್ಲೊಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್ ಶಿಪ್ ತರಬೇತಿ ನೀಡಲಾಗುತ್ತದೆ. ಈ ಇಂಟರ್ನ್ ಶಿಪ್ ತರಬೇತಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20,000 ವರೆಗೆ ಶಿಷ್ಯ ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ 080-26607666, 9036144417, 9242952017, 9980956422 ಅಥವಾ ಜಿಟಿಟಿಸಿ ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಕಾಲೇಜಿಗೆ ಭೇಟಿ ನೀಡಬಹುದು ಎಂದು ದೇವನಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.