ಹರ್ ಘರ್ ತಿರಂಗಾ ವಾಕತಾನ್ ಗೆ ಚಾಲನೆ
ವಿಜಯ ದರ್ಪಣ ನ್ಯೂಸ್…
ಹರ್ ಘರ್ ತಿರಂಗಾ ವಾಕತಾನ್ ಗೆ ಚಾಲನೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 14 :- ಆಗಸ್ಟ್. 15 ರ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ‘ಹರ್ ಘರ್ ತಿರಂಗಾ ವಾಕತಾನ್ ಅಭಿಯಾನ’ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ರವರು ಚಾಲನೆ ನೀಡಿದರು.
ಆಗಸ್ಟ್ 15 ರವರೆಗೆ ಮನೆ ಮನೆ ಮೇಲೆ ಭಾರತದ ಸಾರ್ವಭೌಮತ್ವದ ಸಂಕೇತ ತ್ರಿವರ್ಣ ಧ್ವಜವನ್ನು ಹಾರಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು ಸಾರ್ವಜನಿಕರು ಕೈ ಜೋಡಿಸಿ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾವಿಭಾ ರಾಥೋಡ, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಶಾಲಾ ಶಿಕ್ಷಕರು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.