ರಂಗಶಿಕ್ಷಣಕ್ಕೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್…

ರಂಗಶಿಕ್ಷಣಕ್ಕೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 27,2024 :-ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಕಲಾಮಂದಿರದ ಆವರಣದಲ್ಲಿ ಕಚೇರಿಯನ್ನು ಹೊಂದಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. 35 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮೋ/ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ. ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದಕ್ಕೆ ಸೆಪ್ಟೆಂಬರ್ 05 ವರೆಗೆ ದಿನ ವಿಸ್ತರಿಸಲಾಗಿದೆ. ಆಸಕ್ತರು ಅರ್ಜಿಯನ್ನು ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು-05 ಈ ವಿಳಾಸಕ್ಕೆ ಸಲ್ಲಿಸುವುದು. ಈ ಸಂಬಂಧ ಸಂದರ್ಶನವನ್ನು ಸೆಪ್ಟೆಂಬರ್ 10 ರಂದು ನಡೆಸಲಾಗುವುದು. ಅರ್ಜಿ ನಮೂನೆಯನ್ನು ರಂಗಾಯಣದ ವೆಬ್ಸೈಟ್: rangayanamysore.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದ್ದು, ಸಂದರ್ಶನದ ವೇಳೆ ಹಾಜರುಪಡಿಸಬೇಕಾದ ಮೂಲ ದಾಖಲಾತಿಗಳು-ಜನ್ಮ ದಿನಾಂಕ ದೃಢೀಕರಣ ಪತ್ರ , ಎನ್.ಎಸ್.ಡಿ / ಡಿಪ್ಲೊಮೋ ಪ್ರಮಾಣ ಪತ್ರ, ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣ ಪತ್ರ, ರಂಗಭೂಮಿ ಅನುಭವ ಕುರಿತ ಸ್ವವಿವರ ಪತ್ರ (ಅಗತ್ಯ ದಾಖಲೆಗಳೊಂದಿಗೆ), ಆಧಾರ್ ಕಾರ್ಡ್ ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಮೈಸೂರು ರಂಗಾಯಣದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 27,2024 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಏಕಲವ್ಯ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯ ಅರ್ಜಿಗಳನ್ನು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏಕಲವ್ಯ ಪ್ರಶಸ್ತಿ:

ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ:

2023-24ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ:

2022 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಅದರಂತೆ 2023ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ ತರಬೇತುದಾರರುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್ಲೈನ್ (ವೆಬ್ಸೈಟ್: https://sevasindhu.karnataka.gov.in) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳಿಗೆ ಅರ್ಜಿ ಗಳನ್ನು ಸೆಪ್ಟೆಂಬರ್ 18 ರೊಳಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಛೇರಿಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೂರವಾಣಿ ಸಂಖ್ಯೆ ಹಾಗೂ ಗಣಕಯಂತ್ರ ನಿರ್ವಾಹಕರ ಮೊಬೈಲ್ ಸಂಖ್ಯೆ : 080-29787442 / 9632778567 ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.