58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್…

58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಸೆಪ್ಟೆಂಬರ್ 04, 2024 :- ಸೆಪ್ಟೆಂಬರ್ 08 ರಂದು 58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ”ಯನ್ನು ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
58ನೇ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಮುಂಭಾಗ ಆಚರಿಸಲು ಕ್ರಮ ವಹಿಸಿ, ಸಾಕ್ಷರತಾ ಧ್ವಜಾರೋಹಣ ಮತ್ತು ವೇದಿಕೆ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ದತೆ ಕೈಗೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರಿಗೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಡಯಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವಜನ ಕ್ರೀಡೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಕೃಷಿ ಇಲಾಖೆ, ನಗರಾಭಿವೃದ್ಧಿ ಕೋಶ ಹಾಗೂ ಇತರೆ ಎಲ್ಲಾ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಸಮನ್ವಯತೆ ಹಾಗೂ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೆ ಕ್ರಮ ವಹಿಸಿ ಎಂದರು.

ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ತಾಲ್ಲೂಕು ಮಟ್ಟದಲ್ಲಿ, ಗ್ರಾಮ ಪಂಚಾಯತಿ ಹಂತದಲ್ಲಿ ಆಚರಿಸಲು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಮೂಲಕ ನಿರ್ದೇಶಿಸುವಂತೆ ತಿಳಿಸಿದರು. ಶಾಲಾ ಹಂತದಲ್ಲಿ ಆಚರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲು ಹೇಳಿದರು.

ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಹಂತಗಳಲ್ಲಿ ಸಾಮಾಜಿಕ ಚೇತನ ಕೇಂದ್ರಗಳನ್ನು ಸೆಪ್ಟೆಂಬರ್ 08 ರಂದು ಸ್ಥಾಪಿಸಲು ಕ್ರಮವಹಿಸಿ, ಪ್ರತಿ ಶಾಲೆಯಲ್ಲಿಯು ಸಮುದಾಯ ಸಂಚಲನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಕ್ತ ನಿರ್ದೇಶನ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಶಶಿಕುಮಾರ್ ಎನ್.ಎಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

ಡಿಪ್ಲೊಮಾ ಕೋಸ್೯ಗಳ ಉಳಿಕೆ ಸೀಟುಗಳ ಭರ್ತಿಗಾಗಿ ಅರ್ಜಿ ಆಹ್ವಾನ: ಸೆಪ್ಟೆಂಬರ್ 10 ಕೊನೆ ದಿನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 04,2024:-ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಭೇತಿ ಕೇಂದ್ರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ದೇವನಹಳ್ಳಿ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ಗಳ ದಾಖಲಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ, ಸಂಬಂಧಿಸಿದಂತೆ. ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ನಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಿಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳಿಗೆ ಈ ಕೋರ್ಸ್ ಗಳಿಗೆ ಎಸ್. ಎಸ್. ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾ ತರಬೇತಿಗಳಿಗೆ ದಾಖಲಾತಿ ಪಡೆಯಬಹುದಾಗಿದೆ. ಈ ಡಿಪ್ಲೋಮಾ ಕೋರ್ಸ್ಗಳ ಅವಧಿ 3+1. ಈ ಕೋರ್ಸ್ ಗಳು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ್ದಾಗಿದ್ದು, ಶೇ. 30% ಥಿಯರಿ, ಶೇ. 70% ಪ್ರಾಕ್ಟಿಕಲ್ ಹೊಂದಿರುವ ಕೋರ್ಸ್ ಗಳಾಗಿವೆ. ಈ ಕೋರ್ಸ್ ಅಧ್ಯಯನ ಮಾಡುವಾಗ 3 ವರ್ಷ ಡಿಪ್ಲೊಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್ ಶಿಪ್ ತರಬೇತಿ ನೀಡಲಾಗುತ್ತದೆ. ಈ ಇಂಟರ್ನ್ ಶಿಪ್ ತರಬೇತಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20,000 ವರೆಗೆ ಶಿಷ್ಯ ವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ 080-26607666, 9036144417, 9242952017, 9980956425 ಅಥವಾ ಜಿಟಿಟಿಸಿ ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಕಾಲೇಜಿಗೆ ಭೇಟಿ ನೀಡಬಹುದು ಎಂದು ದೇವನಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.