ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ  ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ:ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್…

ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ  ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ:ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ,ಸೆಪ್ಟೆಂಬರ್ 11,2024 :- ಸೆಪ್ಟೆಂಬರ್ 15 ರಂದು ನಡೆಯಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಮಹತ್ವ ಸಾರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಹಳೆನಿಜಗಲ್ ನಿಂದ ಪ್ರಾರಂಭವಾಗಿ ಡಾಬಸ್ ಪೇಟೆಯ ಮುಖಾಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಕ್ರಾಸ್ (ನಂದಿ ಬೆಟ್ಟದ ಹತ್ತಿರ) ವರೆಗೆ ಒಟ್ಟು 54 ಕಿಲೋಮೀಟರ್ ಇರುತ್ತದೆ. ಹಾಗೂ 2ನೇ ಹಂತದಲ್ಲಿ ಹೊಸಕೋಟೆ ತಾಲ್ಲೂಕಿನ ವೆಂಕಟಪುರ ದಿಂದ ಪ್ರಾರಂಭವಾಗಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡಮಾನಿಕೆರೆಯವರೆಗೆ ಒಟ್ಟು 23 ಕಿಲೋಮೀಟರ್ ಸೇರಿದಂತೆ ಒಟ್ಟು 77 ಕಿಲೋಮೀಟರ್ ವರೆಗೆ ಮಾನವ ಸರಪಳಿ ಕಾರ್ಯಕ್ರಮವು ರಾಷ್ಟ್ರೀಯ ಹೆದ್ದಾರಿ ಮುಖಾಂತರ ಹಾದು ಹೋಗಲಿದೆ.

ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಾಗರೀಕರು ಸೆಪ್ಟೆಂಬರ್ 15 ರ ಭಾನುವಾರ ರಂದು ಬೆಳಿಗ್ಗೆ 09:30 ರಿಂದ 10:30 ರವರೆಗೆ ಆಯಾ ಪ್ರದೇಶದ ವ್ಯಾಪ್ತಿಯಲ್ಲಿನ ಹತ್ತಿರದ ಮಾನವ ಸರಪಳಿಗೆ ಕೈ ಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.