ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್…
ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 24, 2024 :- ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ14 ಗ್ರಾಮಗಳನ್ನು ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆಯಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ 79.156 ಕೋಟಿ ರೂಪಾಯಿಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ.
ಈ ಯೋಜನೆಯು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ. 2024-25ನೇ ಸಾಲಿನಿಂದ 2028-29ನೇ ಸಾಲಿನ 5 ವರ್ಷಗಳ ಈ ಅಭಿಯಾನಕ್ಕೆ ಕೇಂದ್ರ ಬುಡಕಟ್ಟು ಮಂತ್ರಾಲಯ (MOTA) ನೋಡಲ್ ಸಚಿವಾಲಯವಾಗಿದ್ದು, 17 ಇಲಾಖೆಗಳ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಕ್ರಿಯಾ ಯೋಜನೆಯಡಿ ಕೇಂದ್ರ & ರಾಜ್ಯ ಸರ್ಕಾರಗಳು ಮೀಸಲಿರಿಸಿದ ರೂ.79.156 ಕೋಟಿ ಅನುದಾನದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುಮ್ಮನಹಳ್ಳಿ, ಹಣಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೊಮ್ಮನಹಳ್ಳಿ, ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಲೇರಹಳ್ಳಿ, ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೆಂಕಟೇನಹಳ್ಳಿ, ಮಂಡಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿಕ್ಕತತ್ತಮಂಗಲ, ಕಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಂಪತಿಮ್ಮನಹಳ್ಳಿ, ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏರ್ತಿಗಾನಹಳ್ಳಿ, ಭುವನಹಳ್ಳಿ, ಬೆಟ್ಟಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಯಸಂದ್ರ, ಯಲಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೊಟ್ಟಬಾರ್ಲು,ಬಮ್ಮನಹಳ್ಳಿ, ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೊನ್ನಹಳ್ಳಿ, ಕೋರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊಂಡೆನಹಳ್ಳಿ, ಹೊಸಕೋಟೆ ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಲಗೇರೆಪುರ ಈ 14 ಗ್ರಾಮಗಳಲ್ಲಿ ಕೆಳಕಂಡ ಮೂಲಭೂತ ಸೌಕರ್ಯಗಳನ್ನು 17 ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾಗುತ್ತಿದೆ.
1. ಗ್ರಾಮೀಣಾಭಿವೃದ್ಧಿಇಲಾಖೆಯ (MORD)- ಪಕ್ಕಾ ಮನೆಗಳು (PMAY), ಸಂಪರ್ಕ ರಸ್ತೆ (PMGSY), 2. ಗ್ರಾಮೀಣ ನೀರು ಸರಬರಾಜು ಇಲಾಖೆ- ನೀರು ಸರಬರಾಜು-ಜಲ ಜೀವನ ಮಿಷನ್ (JJM), 3. ವಿದ್ಯುತ್ ಇಲಾಖೆ (ಮೆಸ್ಕಾಂ)- ಮನೆ ವಿದ್ಯುಧೀಕರಣ (RDSS), 4. ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ- ಆಫ್-ಗ್ರಿಡ್ ಸೌರ, ಹೊಸ ಸೌರ ವಿದ್ಯುತ್ ಯೋಜನೆ 5. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- ಸಂಚಾರಿ ವೈದ್ಯಕೀಯ ಘಟಕಗಳು ರಾಷ್ಟ್ರೀಯ ಆರೋಗ್ಯ ಮಿಷನ್ ಆಯುಷ್ ಮಾನ್ ಕಾರ್ಡ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY)-NHA 6. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ- ಸಂಪರ್ಕಗಳು (LPG PM Ujwala Yojana) 7. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ- ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ- ಪೋಷನ್ ಅಭಿಯಾನ 8. ಶಿಕ್ಷಣ ಇಲಾಖೆ- ವಿದ್ಯಾರ್ಥಿ ನಿಲಯಗಳ ನಿರ್ಮಾಣ- ಸಮಗ್ರ ಶಿಕ್ಷಣ ಅಭಿಯಾನ (SSA) 9. ಆಯುಷ್ ಇಲಾಖೆ- ಪೋಷನ್ ವಾಟಿಕಾಸ್-ರಾಷ್ಟ್ರೀಯ ಆಯುಷ್ ಮಿಷನ್ 10. ಟೆಲಿಕಾಂ ಇಲಾಖೆ- ಯುನಿವರ್ಸಲ್ ಸೇವೆ ( ಆಬ್ಲಿಗೇಷನ್ ನಿಧಿ-ಭಾರತ ನೆಟ್) (DOT-MOC) 11. ಕೌಶಲ್ಯಾಭಿವೃದ್ಧಿ ಇಲಾಖೆ- ಸ್ಕಿಲ್ ಇಂಡಿಯಾ 12. ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆ – ಡಿಜಿಟಲ್ ಇನಿಶಿಯೇಟಿವ್ಸ್ 13. ಕೃಷಿ ಇಲಾಖೆ- ಸುಸ್ತಿರ ಕೃಷಿ ಉತ್ತೇಜನ (Multiply schemes of DOEFW) 14. ಮೀನುಗಾರಿಕೆ ಇಲಾಖೆ- ಮೀನು ಸಂಸ್ಕೃತಿಯ ಬೆಂಬಲ (PMMSY), ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ- ಜಾನುವಾರು ಪಾಲನೆ-ರಾಷ್ಟ್ರೀಯ ಜಾನುವಾರು ಮಿಷನ್ 15. ಪಂಚಾಯತ್ ರಾಜ್ ಇಲಾಖೆ- ಸಾಮಾರ್ಥ್ಯದ ಕಟ್ಟಡ-ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ (RGSA) 16. ಪ್ರವಾಸೋದ್ಯಮ ಇಲಾಖೆ- Tribal Home Stays-Swadesh Darshana 17. ಬುಡಕಟ್ಟು ವ್ಯವಹಾರಗಳ ಸಚಿವಾಲಯ- ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ (PMAAGY) ಯೋಜನೆಗಳು ಅನುಷ್ಟಾನಗೊಳ್ಳಲಿವೆ.
100 ಬುಡಕಟ್ಟು ಬಹು ಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ/ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲ ಸೌಕರ್ಯಗಳನ್ನು ಸುಧಾರಿಸುವುದು. ಕೌನ್ಸಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮಧ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು ಉನ್ನತ ಪ್ರದರ್ಶನ ನೀಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡುವಂತಹ ಯೋಜನೆಗಳನ್ನು ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅವಕಾಶ ಕಲ್ಪಿಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 14 ಗ್ರಾಮಗಳ ಎಲ್ಲಾ ಬುಡಕಟ್ಟು ಜನಾಂಗದವರು ಈ ಯೋಜನೆಯ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.