ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್….

ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 26, :- ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದ್ದು ಜಮೀನಿನ ಸರ್ವೆ ನಕ್ಷೆ(ಸ್ಕೆಚ್)- ನಮೂನೆ 11 ಇ ಇರುವ ಮೋಜಣಿ ತಂತ್ರಾಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು 2016 ಅಕ್ಟೋಬರ್ 05 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು 2014 ಜುಲೈ 18 ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.
ಮೇಲಿನ ಆಸ್ತಿಗಳನ್ನು ಹೊರತು ಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ(ತಂತ್ರಾಶ)ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ 2020 ಜನವರಿ 01 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ನಗರಾಭಿವೃದ್ಧಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುತ್ತಾರೆ. ಮುಂದುವರೆದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2, ತಂತ್ರಾಂಶದೊಂದಿಗೆ 2024 ಸೆಪ್ಟೆಂಬರ್. 07 ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ:ಕಂಇ/20/ಎಂಎನ್‌ಎಂಯು/2023, ದಿನಾಂಕ:23-09-2024 ರ ಆದೇಶದ ಮೂಲಕ ಆದೇಶಿಸಲಾಗಿದೆ. ಆದಕಾರಣ ದಿನಾಂಕ:07-09-2024 ರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಛೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರಿಗೆ ಆಗುವಂತಹ ಉಪಯೋಗಗಳು

ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು.
ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದು.

ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

@@@@@@@@@@@@@@@@@@@@

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 26,2024:-2024-25ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಬರುವ B.Sc Nursing and GNM Nursing Course ಗಳ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಲಾಗಿದ್ದು, ವಿದ್ಯಾರ್ಥಿಗಳು https://sevasindhu.karnataka.gov.in/sevasindhu/ Department Services ಈ ಲಿಂಕ್ನ ಮೂಲಕ ಆನ್ಲೈನ್ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಹಾಗೂ NPCI Mapping ಆಗಿರುವುದನ್ನು ಖಾತ್ರಿಪಡಿಸಿಕೊಳ್ಳತಕ್ಕದ್ದು, ಅರ್ಜಿ ಸಲ್ಲಿಸಿದ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರಿಂದ ದೃಢೀಕರಿಸಿ, ಹಾರ್ಡ್ ಪ್ರತಿಯನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಢಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ|| ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://dom. karnataka.gov.in ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ.

ಅರ್ಹತೆಗಳು: ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಕೋರ್ಸ್ ಅವಧಿ-ಪೂರ್ಣಾವಧಿ, ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು, ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ವಿದ್ಯಾರ್ಥಿಗಳು ಈ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ (Fresh) ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮಾಹಿತಿ ಕೇಂದ್ರ, ಜಿ.ಯು.ಹೆಚ್.ಪಿ.ಬಿ.ಎಸ್ ಕಾಂಪೌಂಡ್ ಉರ್ದು ಶಾಲೆ ಆವರಣ, ವಿಜಯಪುರ. ದೇವನಹಳ್ಳಿ ತಾಲ್ಲೂಕು. ರೇಷ್ಮಾ-8861926851, ತಾಲ್ಲೂಕು ಮಾಹಿತಿ ಕೇಂದ್ರ, ಹೊಸ ಬಸ್ ಸ್ಟಾಂಡ್ ಹತ್ತಿರ, ತಾಲ್ಲೂಕು ಪಂಚಾಯತ ಆವರಣ, ದೊಡ್ಡಬಳ್ಳಾಪುರ ಟೌನ್ ಯಾಸ್ಮೀನ್ ತಾಜ್-9986874857, ತಾಲ್ಲೂಕು ಮಾಹಿತಿ ಕೇಂದ್ರ, ತಾಲ್ಲೂಕು ಪಂಚಾಯತ ಆವರಣ, ಟಿ.ಬಿ.ಬಸ್ಸ್ಟಾಂಡ್ ಮುಂಭಾಗ, ಸುಭಾಸ್ ನಗರ ನೆಲಮಂಗಲ ತಾಲ್ಲೂಕು ಆಫ್ರಿನ್ ಖಾನಂ-8660197516, ತಾಲ್ಲೂಕು ಮಾಹಿತಿ ಕೇಂದ್ರ, ಮಾಲೂರು ರಸ್ತೆ, ರೂಬಿ ಲೇಔಟ್, ಹೊಸಕೋಟೆ ಟೌನ್ ತಾಲ್ಲೂಕು ಅಲಂದಾರ್ ಎಂ-7676905779 ಈ ತಾಲ್ಲೂಕು ಮಾಹಿತಿ ಕೇಂದ್ರದ ದತ್ತಾಂಶ ನಿರ್ವಾಹಕರನ್ನು ಸಂಪರ್ಕಿಸುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.