ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್…

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ:

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನವೆಂಬರ್. 04 ರಿಂದ ನವೆಂಬರ್. 21ರ ವರೆಗೆ ನಡೆಯಲಿರುವ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಅಂಗವಾಗಿ ಕುಷ್ಠರೋಗದ ಕುರಿತು ಮಾಹಿತಿಯುಳ್ಳ ಸಾರ್ವಜನಿಕ ಜಾಗೃತಿಯ ಪೋಸ್ಟರ್ ಅನ್ನು ಸೋಮವಾರದಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಬಿಡುಗಡೆಗೊಳಿಸಿದರು.

ಜಿಲ್ಲೆಯಾದ್ಯಂತ ಕುಷ್ಠರೋಗ ಲಕ್ಷಣ ಕಂಡು ಬರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಅಭಿಯಾನ ನಡೆಯಲ್ಲಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ಕುಷ್ಠರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ರೋಗಗಳ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ, ವಿಶ್ವಸಂಸ್ಥೆಯ ಸರ್ವೆಕ್ಷಣಾಧಿಕಾರಿ ಡಾ. ನಾಗರಾಜ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಹೇಮಾವತಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಸೀಮಾ ಮಾಬಳೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರ ಡಾ. ವಿದ್ಯಾರಾಣಿ ಪಿ.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

@@@@@@@@@@@@@@@@@@@@

ರಾಜ್ಯ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ:

ಹ್ಯಾಂಡ್ ಬಾಲ್ ಹಾಗೂ ನೆಟ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬೆಂಗಳೂರು ಗ್ರಾಮಾಂತರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 07, 2024 :- ಮೈಸೂರಿನ ಅರಮನೆ ಮೈದಾನದಲ್ಲಿ ದಸರಾ ಉತ್ಸವ ಅಂಗವಾಗಿ ಅಕ್ಟೋಬರ್ 03 ರಿಂದ ಅಕ್ಟೋಬರ್ 06 ರ ವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ‘ರಾಜ್ಯ ಮಟ್ಟದ ದಸರಾ ಸಿಎಂ ಕಪ್-2024ರ ಕ್ರೀಡಾಕೂಟ’ದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಹ್ಯಾಂಡ್ ಬಾಲ್ ಮತ್ತು ನೆಟ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಪುರುಷರ ವಿಭಾಗದ ನೆಟ್ಬಾಲ್ ಕ್ರೀಡೆಯಲ್ಲಿ ಪವನ್ ಕುಮಾರ್ ತಂಡವು ಪ್ರಥಮ ಸ್ಥಾನ, ಹ್ಯಾಂಡ್ ಬಾಲ್ ಪುರುಷರ ವಿಭಾಗದಲ್ಲಿ ಸುನಿಲ್ ಹಾಗೂ ತಂಡವು ಪ್ರಥಮ ಸ್ಥಾನ ಮತ್ತು ಹಾಕಿ ಮಹಿಳಾ ವಿಭಾಗದಲ್ಲಿ ಮುನಿರತ್ನಮ್ಮ ತಂಡವು ದ್ವೀತಿಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿ ವಿಜೇತ ತಂಡಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಅಭಿನಂದನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಅವರು ತಿಳಿಸಿದ್ದಾರೆ.