ಬೆಂಗಳೂರಿನ ರಾಜಾಜಿನಗರದಲ್ಲಿ ಅ. 20ರಂದು ಉದ್ಯೋಗ ಮೇಳ
ವಿಜಯ ದರ್ಪಣ ನ್ಯೂಸ್ ……
ಬೆಂಗಳೂರಿನ ರಾಜಾಜಿನಗರದಲ್ಲಿ ಅ. 20ರಂದು ಉದ್ಯೋಗ ಮೇಳ
ಉದ್ಯೋಗಾಕಾಂಕ್ಷೀಗಳು ಉದ್ಯೋಗ ಮೇಳದಲ್ಲಿ ನೋಂದಾಯಿಸಿಕೊಳ್ಳಿ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 15, 2024 :- ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ತಂತ್ರಜ್ಞಾನ ಸಂಸ್ಥೆ(NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS), ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆ.ಎಲ್.ಇ ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, 1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10 ಇಲ್ಲಿ 2024ರ ಅಕ್ಟೋಬರ್ 20 ರಂದು ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ 100 ಕ್ಕಿಂತ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಾಧ್ಯಮ/ಸಣ್ಣಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲ್ಲಿದ್ದಾರೆ. ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತರ ಪದವಿ, ಇಂಜಿನಿಯರಿಂಗ್ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರಗಳನ್ನು https://jobfair.calicut.nielit.in/ ವೆಬ್ಸೈಟ್ ನಲ್ಲಿ ನೋಂದಾಯಿಸಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉದ್ಯೋಗಾಕಾಂಕ್ಷೀ ಅಭ್ಯರ್ಥಿಗಳು ಬಯೋಡಾಟ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ ಪ್ರತಿಗಳೊಂದಿಗೆ ಅಕ್ಟೋಬರ್ 20 ರಂದು ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲಚೇತನರ ಆರೈಕೆಗಾಗಿ 1000 ರೂಗಳ ಪ್ರೋತ್ಸಾಹ ಧನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 15 :-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಪ್ರತಿ ಮಾಹೆ(ತಿಂಗಳು) 1000 ರೂಪಾಯಿಗಳ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನರು ಅವರ ಆರೈಕೆದಾರರು ಅಗತ್ಯ ದಾಖಲಾತಿಗಳೊಂದಿಗೆ, ವಿಆರ್‌ಡಬ್ಲ್ಯೂ/ಯುಆರ್‌ಡಬ್ಲ್ಯೂ/ಎಂಆರ್ಡಬ್ಲ್ಯೂ/ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಕ್ಟೋಬರ್ 30 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿಕಲಚೇತನರ ವಿಶಿಷ್ಟ ಗುರುತಿನ (ಯುಡಿಐಡಿ), ವಿಕಲಚೇತನರ ಆಧಾರ್ ಕಾರ್ಡ್, ಜಂಟಿ ಭಾವಚಿತ್ರ (ವಿಕಲಚೇತನರ ಮತ್ತು ಆರೈಕೆದಾರರ), ಆರೈಕೆದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ಆರೈಕೆದಾರರ ಆಧಾರ್ ಕಾರ್ಡ್.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ. ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ- 080-29787441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ.
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 15, 2024:- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 05 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.