ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ
ವಿಜಯ ದರ್ಪಣ ನ್ಯೂಸ್…
ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ ೦6: 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಭೋಲಾ ಪಂಡಿತ್ ಅವರು ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ “ಪ್ಯಾನ್-ಇಂಡಿಯಾ ರೆಸ್ಕ್ಯೂ ಆಂಡ್ ರಿಯಾಬಿಲೇಷನ್ ಕ್ಯಾಂಪೇನ್ ಪ್ರೊಗ್ರಾಮ್ – ಎ ಸ್ಟೆಪ್ ಟು ಎರ್ರ್ಯಾಡಿಕೇಟ್ ಚೈಲ್ಡ್ ಲೇಬರ್” ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಪ್ರಚಾರ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಹರ್ಷವರ್ಧನ್ ಇತರರು ಹಾಜರಿದ್ದರು.
&&&&&&&&&&&&&&&&&&&&
ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 0 6 , ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.
ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ *ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು* ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.