ಜಿಲ್ಲಾಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ವಿಜಯ ದರ್ಪಣ ನ್ಯೂಸ್…

ಜಿಲ್ಲಾಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನ.27 :

ಕೃಷಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆ ಹಾಗೂ ಆತ್ಮ ಯೋಜನೆಯಡಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಜಿಲ್ಲೆಯ ವಿವಿಧ ಭಾಗಗಳಿಂದ ರೈತ ಮಹಿಳೆಯರು ಆಗಮಿಸಿ ಮನೆಯಿಂದಲೇ ಸಿರಿಧಾನ್ಯಗಳಿಂದ ತಯಾರಿಸಿದ್ದ ಸಿಹಿ, ಖಾರ ಮತ್ತು ಮರೆತು ಹೋದ ವಿವಿಧ ಖಾದ್ಯಗಳನ್ನು ಸ್ಪರ್ಧೆಯಲ್ಲಿ ಪ್ರದರ್ಶಿಸಿದರು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹಾಗೂ ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ವಿವಿಧ ಖಾದ್ಯಗಳನ್ನು ಸೇವನೆ ಮಾಡುವ ಮೂಲಕ ಸಿರಿಧಾನ್ಯಗಳ ಸೇವನೆಯಿಂದ ಆಗುವ ಆರೋಗ್ಯ ಲಾಭಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ 32 ರೈತ ಮಹಿಳೆಯರು ಭಾಗವಹಿಸಿದ್ದರು. ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಅಥವಾ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ ತೋರಿಕೆ (presentation/ appearance), ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಂಡು ಮೂವರಿಗೆ ಬಹುಮಾನ ವಿತರಿಸಲಾಯಿತು. ಮೂವರು ರೈತ ಮಹಿಳೆಯರು ರಾಜ್ಯ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವರು.

ಇದೇ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

&&&&&&&&&&&&&&&&&&&&&&&&

ವಿಕಲಚೇತನ ಸಪ್ತಾಹ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ ನ.27:-

ವಿಶ್ವ ವಿಶೇಷಚೇತನರ ದಿನಾಚರಣೆ-2024 ಅಂಗವಾಗಿ “ವಿಕಲಚೇತನರ ಸಪ್ತಾಹ” ಆಚರಿಸುವ ಸಂಬಂಧ ವಿಶೇಷಚೇತನರ ಸರ್ವತೋಮುಖ ಅಭಿವೃದ್ಧಿ ಅಂದರೆ ಶಿಕ್ಷಣ, ಪುನರ್ವಸತಿ, ಸಾಮಾಜಿಕ ಭದ್ರತೆ, ಉದ್ಯೋಗಳಲ್ಲಿ ಅವಕಾಶಗಳನ್ನು ಕಲ್ಪಿಸಿ, ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ 21 ಅಂಗವೈಕಲ್ಯತೆ ಗುರುತಿಸಲಾಗಿದೆ.

ದೈಹಿಕ ಅಂಗವಿಕಲತೆಯಡಿ ಚಲನವಲನ ದೋಷ, ಕುಷ್ಟರೋಗದಿಂದ ಗುಣವಾಗಿರುವವರು, ಮೆದುಳು ಪಾರ್ಶ್ವವಾಯು, ಕುಬ್ಜತೆ, ಮಸ್ಕುಲರ್ ಡಿಸ್ಟ್ರೋಪಿ, ಆಸಿಡ್ ದಾಳಿಗೆ ತುತ್ತಾದವರು. ದೃಷ್ಟಿದೋಷದಡಿ ಅಂಧತ್ವ, ಮಂದ ದೃಷ್ಠಿ. ಶ್ರವಣ ದೋಷದಡಿ ಕಿವುಡುತನ, ಹೆಚ್ಚಿನ ಶ್ರವಣ ದೋಷ, ಮಾತು ಮತ್ತು ಸಂವಹನ ಅಂಗವಿಕಲತೆ, ಬೌದ್ಧಿಕ ಅಂಗವಿಕಲತೆ, ನಿರ್ದಿಷ್ಠ ಕಲಿಕಾ ಅಂಗವಿಕಲತೆ, ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್, ಮಾನಸಿಕ ಅಸ್ವಸ್ಥತೆ. ದೀರ್ಘಕಾಲದ ನರಸಂಬಂಧಿ ರೋಗದಡ ಮಲ್ಟಿಪಲ್ ಸ್ಕ್ಲೆರೋಸಿಸ್, ಪಾರ್ಕಿನ್ಸ್ ನ್. ರಕ್ತಸಂಬಂಧಿತ ಅಂದರೆ ಹಿಮೋಫಿಲಿಯಾ, ಥಲಸ್ಸೇಮಿಯಾ, ಸಿಕಲ್‌ಸೆಲ್ ಬಹುವಿಧ ಅಂಗವಿಕಲತೆ ಎಂದು ಗುರುತಿಸಲಾಗಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 21 ವಿಧದ ಅಂಗವೈಕಲ್ಯತೆಗೆ ವಿವಿಧ ಯೋಜನೆಗಳು/ಕಾರ್ಯಕ್ರಮಗಳ ಮೂಲಕ ಹಲವಾರು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು ಎಲ್ಲಾ ವಿಶೇಷಚೇತನರು/ಸಾರ್ವಜನಿಕರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆಯಲು ತಿಳಿಯಪಡಿಸಿದೆ.

ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ಪಟ್ಟಣ ಪಂಚಾಯಿತಿಯ/ಪುರಸಭೆಯ/ನಗರಸಭೆಯ ನಗರ ಪುನರ್ವಸತಿ ಕಾರ್ಯಕರ್ತರನ್ನು, ತಾಲ್ಲೂಕು ಪಂಚಾಯಿತಿಯ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ನಂ3, ನೆಲ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, 562110 ಸಂಪರ್ಕಿಸಿ ಅಥವಾ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:080-29787441ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.