ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಜಯ ದರ್ಪಣ ನ್ಯೂಸ್….

ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿ.3:- ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಈ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸವನ್ನು ಮಾಡಿಕೊಡಲು ಶಿವಕೋಟಿ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13,000 ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಮೇತ ಬಿಲ್ ಕಲಕ್ಟರ್ ಪ್ರದೀಪ್ ರವರನ್ನು ಬಂಧಿಸಿ ತನಿಖೆ ಕೈಗೊಂಡಿರುತ್ತಾರೆ.

ಈ ಟ್ರ್ಯಾಪ್ ಪ್ರಕ್ರಿಯೆಯನ್ನು ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕ ಶ್ರೀ ಪವನ್ ನೆಟ್ಟೂರು, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್  ರಮೇಶ್ ಮತ್ತು ಸಿಬ್ಬಂದಿ ವರ್ಗದವರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ಡಿ.04 ರಂದು ಕೆ.ಡಿ.ಪಿ ಸಭೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಡಿ.03 :- ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 04 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.