ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್…..

ಡಿಸೆಂಬರ್ 21 ರಂದು ಪ್ರಶಾಸನ್ ಗಾಂವ್ ಕೀ ಓರ್ ವಿಶೇಷ ಆಂದೋಲನ

ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿ.20 :-

‘ಪ್ರಶಾಸನ್ ಗಾಂವ್ ಕಿ ಓರ್’ ಅಭಿಯಾನದ ಡಿ.19 ರಿಂದ 24 ರವರೆಗೆ ಉತ್ತಮ ಆಡಳಿತ ವಾರದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಹಾಜರಿದ್ದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವರು.

ಇದರ ಅಂಗವಾಗಿ ಡಿಸೆಂಬರ್ 21 ರ ಶನಿವಾರದಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಚೇರಿಗಳಲ್ಲಿ ಹಾಜರಿದ್ದು ವಿಶೇಷ ಆಂದೋಲನದ ರೀತಿಯಲ್ಲಿ ಸಾರ್ವಜನಿಕರಿಗೆ ಸೇವೆ ನೀಡುವರು.

ಸಾರ್ವಜನಿಕರು ಈ ವಿಶೇಷ ಆಂದೋಲನದಲ್ಲಿ ಭಾಗಿಯಾಗಿ ಕುಂದುಕೊರತೆಗಳ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಪ್ರಕಟಣೆ

ಬೆಂ.ಗ್ರಾ.ಜಿಲ್ಲೆ , ಡಿ.20 (:-

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಕಛೇರಿ ಗಳು, ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯದ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ಕಛೇರಿಯ ಸಮಯದಲ್ಲಿ ಆಗಮಿಸುತ್ತಿರುತ್ತಾರೆ. ಕೆಲವೊಮ್ಮೆ ಸಾರ್ವಜನಿಕರು, ಸರ್ಕಾರ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳು ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ / ಧರಣಿ ಮಾಡುವ ಮೊದಲು ಜಿಲ್ಲಾಧಿಕಾರಿಯವರಿಂದ ಮತ್ತು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದುಕೊಂಡು ಕಛೇರಿ ಸಮಯದಲ್ಲಿ ಶಾಂತಿಯುತ, ಸಾಂಕೇತಿಕ ಪ್ರತಿಭಟನೆ ಮಾಡಬಹುದಾಗಿರುತ್ತದೆ.

ಜಿಲ್ಲಾಡಳಿತ ಭವನದ ಸಮೀಪದಲ್ಲಿ ಯಾವುದೇ ಖಾಸಗಿ ವಸತಿ ಸಮುಚ್ಚಯಗಳಾಗಲಿ, ಸರ್ಕಾರಿ ವಸತಿ ಗೃಹಗಳಾಗಲಿ ಇರುವುದಿಲ್ಲ, ಸಾರ್ವಜನಿಕ ಸಂಚಾರ ತೀರಾ ವಿರಳವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಬಹುದಾದ್ದರಿಂದ, ಸಾರ್ವಜನಿಕರ ಸುರಕ್ಷತೆ / ಭದ್ರತಾ ಹಿತದೃಷ್ಟಿಯಿಂದ ಸರ್ಕಾರಿ ಕಛೇರಿಯ ಅವಧಿ ಮೀರಿ ಜಿಲ್ಲಾಡಳಿತ ಭವನ ಆವರಣದಲ್ಲಿ ಪ್ರತಿಭಟನೆ ಅಥವಾ ಧರಣಿ ಮಾಡಬಾರದೆಂದು ಸಾರ್ವಜನಿಕರಲ್ಲಿ ಮನವಿ.

ಒಂದು ವೇಳೆ ಯಾವುದೇ ಅನುಮತಿ ಇಲ್ಲದೆ ಪ್ರತಿಭಟನೆ / ಧರಣಿ ನಡೆಸಿದಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹವರ ವಿರುದ್ಧ ದಂಡ ಪ್ರಕ್ರಿಯಾ ಸಂಹಿತೆ, 1973 ಕಲಂ 129(1) k(2) ರೀತ್ಯಾ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.