ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ
ವಿಜಯ ದರ್ಪಣ ನ್ಯೂಸ್….
ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ
ಬೆಂ.ಗ್ರಾ.ಜಿಲ್ಲೆ, ಡಿ.21:-
ತಾಲ್ಲೂಕು ಪಂಚಾಯಿತಿ ಆವರಣದಲ್ಲಿಂದು ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 108.50 ಲಕ್ಷ ರೂಗಳ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.
ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿಕೊಡಲು, ನಗರೋತ್ಥಾನ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿಕೊಡಲು, ರಸ್ತೆ ಅಭಿವೃದ್ಧಿಗೆ ಹಾಗೂ ರಸ್ತೆ ಅಗಲೀಕರಣಕ್ಕೆ ಅನುದಾನ ಕಲ್ಪಿಸಿಕೊಡಲು ಮನವಿ ಮಾಡಿದರು. ಸಚಿವರು ಮನವಿಗೆ ಸ್ಪಂದಿಸಿ ನಗರೋತ್ಥಾನ ಕಾಮಗಾರಿಗಳು ಒಂದು ತಿಂಗಳ ಒಳಗಾಗಿ ಶುರು ಆಗಬೇಕು. ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಟೌನ್ ಶಿಪ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ , ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್, ಉಪಾಧ್ಯಕ್ಷ ಮಲ್ಲೇಶ್ , ಜಿಪಂ ಸಿಇಒ ಡಾ. ಕೆ ಎನ್ ಅನುರಾಧ, ತಹಶೀಲ್ದಾರ ವಿಭಾ ವಿದ್ಯಾ ರಾಥೋಡ್ , ಪೌರಾಯುಕ್ತ ಕಾರ್ತಿಕ್ ಈಶ್ವರ್ , ತಾಪಂ ಇಒ ಮುನಿರಾಜು, ನಗರಸಭಾ ಸದಸ್ಯರು, ನಗರಸಭೆ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.