76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್….

76ನೇ ಗಣರಾಜ್ಯೋತ್ಸವ ದಿನಾಚರಣೆ

ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಸೂಚನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ.10: 2025 ರ ಜನವರಿ 26 ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “76ನೇ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಜನವರಿ 26 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 07.30 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ದೇವನಹಳ್ಳಿಯ ಕ್ರೀಡಾಂಗಣದಲ್ಲಿ ಬೆಳಗ್ಗೆ 09.00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಗಣರಾಜ್ಯೋತ್ಸವದ ದಿನದಂದು ಜಿಲ್ಲಾ, ತಾಲ್ಲೂಕು ಕಛೇರಿಗಳನ್ನು ದೀಪಾಲಂಕಾರದಿಂದ ಅಲಂಕೃತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಶಿಷ್ಟಾಚಾರದಂತೆ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ವೇದಿಕೆಗೆ ಅಗತ್ಯವಾದ ಅಲಂಕಾರಿಕ ಹೂ ಗಿಡಗಳ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸಾಧಕರಿಗೆ ಪ್ರಶಸ್ತಿ, ಪಥಸಂಚಲನ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಪ್ಲಾಸ್ಟಿಕ್ ಬಳಕೆ ನಿಷೇಧ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಗಣರಾಜ್ಯೋತ್ಸವ ಆಚರಣೆಯನ್ನು ಯಶಸ್ವಿಗೊಳಿಸಲು ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಭೆಯಲ್ಲಿ  ಬಯಪಾ ಅಧ್ಯಕ್ಷ  ಶಾಂತಕುಮಾರ, ಜಿ.ಪಂ ಯೋಜನಾ ನಿರ್ದೇಶಕರ ವಿಠಲ್ ಕಾವ್ಳೆ, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಷೇಶ ಪ್ರೋತ್ಸಾಹಧನಕ್ಕಾಗಿ ಬಿ.ಎಡ್ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ, ಜ.10 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ 2025ರ ಜನವರಿ 20 ರ ವರೆಗೂ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9986874857, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9591176959, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 7676905779 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.