ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ವಿಜಯ ದರ್ಪಣ ನ್ಯೂಸ್…
ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ಶಿರಾ: ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮತ್ತು 22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸ್ಪಟಿಕಪುರಿ ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಜ. 19 ರಿಂದ 25 ನಡೆಯಲಿದೆ.
22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ:
ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅನ್ನದಾತನ ಕೃಷಿಯಲ್ಲಿ ಬದಲಾವಣೆ ತರಬೇಕು ಎಂಬ ಸದುದ್ದೇಶದಿಂದ ಶ್ರೀ ಮಠ ಮತ್ತು ಜಿಪಂಸಹಯೋಗದೊಂದಿಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಏರ್ಪಡಿಸುವ ಮೂಲಕ ಕಡಿಮೆ ನೀರಿನ ಪ್ರಮಾಣದಲ್ಲಿ ಹೆಚ್ಚು ಲಾಭ ತರುವಂತೆ ನೂತನ ಕೃಷಿಯ ಬಗ್ಗೆ ಪ್ರತ್ಯೇಕ್ಷಿಕ ಬೆಳೆಗಳ ಮೂಲಕ ಮಾಹಿತಿ ನೀಡುತ್ತಿರುವುದು ಲಕ್ಷಾಂತರ ರೈತರಿಗೆ ಸಹಕಾರಿಯಾಗಿದೆ.
ಅಲ್ಲದೆ ಕೃಷಿ ತೋಟಗಾರಿಕೆ, ರೇಷ್ಮೆ ಅರಣ್ಯ ಇಲಾಖೆ ಗಳಲ್ಲಿ ರೈತರು ಸಮನ್ವಯ ಸಾಧಿಸಬೇಕು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳ ಬೇಕು ಎಂಬ ಸಂಕಲ್ಪ ದೊಂದಿಗೆ ರೈತರಿಗೆ ಬೃಹತ್ ಸಮಾವೇಶ ಹಾಗೂ ಬೆಳೆಗಳ ಸಮಗ್ರ ಮಾಹಿತಿ ತಿಳವಳಿಕೆ ನೀಡುವ ಕಾರ್ಯಾಗಾರಗಳನ್ನು ಏರ್ಪಡಿಸಿ ಸಾಕಷ್ಟು ರೈತರಲ್ಲಿ ಹೊಸ ಚೈತನ್ಯ ಮೂಡಿಸುತ್ತಿದೆ.
ಆರೋಗ್ಯ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಹಾಗೂ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಶಿಕ್ಷಣ ಶಿಕ್ಷಕರಿಗೆ ಮೌಲ್ಯ ಆಧಾರಿತ ಶಿಕ್ಷಣದ ಬಗ್ಗೆ ಕಾರ್ಯಗಾರ ಹಾಗೂ ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಆಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳೆಯರಲ್ಲಿ ಕಾನೂನಿನ ಅರಿವು ಹಾಗೂ ಜಾಗೃತಿ ಮೂಡಿಸುವ ಬೃಹತ್ ಮಹಿಳಾ ಸಮಾವೇಶ ಆ ಯೋಜನೆ ಮಾಡುವ ಮೂಲಕ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಮೆರಗು
ನೀಡುತ್ತಿದ್ದಾರೆ. ಓಂಕಾರೇಶ್ವರಸ್ವಾಮಿ ಕಲ್ಲುಗಾಲಿ ರಥೋತ್ಸವ:
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜನವರಿ 19 ರ ಭಾನುವಾರ ರಾತ್ರಿ 11.00 ಗಂಟೆಗೆ ಕಲ್ಲುಗಾಲಿ ರಥೋತ್ಸವ ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.ನಂಜಾವಧೂತ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆ ಯಲಿದ್ದು, ತಮಿಳುನಾಡು ಅಂಧ್ರಪ್ರದೇಶ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳ ಸಾವಿರಾರು ಭಕ್ತರು ಈ ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಓಂಕಾರೇಶ್ವರ ಸ್ವಾಮಿಗೆ ಭಕ್ತಿ ಸಮರ್ಪಿಸಲಿದ್ದಾರೆ.
ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಉದ್ಘಾಟನೆ:
22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಜ.19ರ ಭಾನುವಾರ ಸಂಜೆ 6. ಗಂಟೆಗೆ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.ನಂಜಾವಧೂತ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಉದ್ಘಾಟನೆಗೊಳ್ಳಲಿದ್ದು, ಕರ್ನಾಟಕ ಸರ್ಕಾರದ ಗಣ್ಯರು ವಸ್ತು ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಕೃಷಿ ತೋಟಗಾರಿಕೆ, ಅರಣ್ಯ, ರೇಷ್ಮೆ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮಳಿಗೆಗಳು ಉದ್ಘಾಟನೆ ಗೊಳ್ಳಲಿದ್ದು ಈ ಮಳಿಗೆ ಗಳಲ್ಲಿ ರೈತ ಮತ್ತು ಜನಸಾಮಾನ್ಯರಿಗೆ ಅನುಕೂಲವಾಗುವ ಸಮಗ್ರ ಮಾಹಿತಿ ಲಭ್ಯವಿರಲಿದೆ.