ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ : ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು
ವಿಜಯ ದರ್ಪಣ ನ್ಯೂಸ್…
ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು
ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾದ ಬಳಿ ನೆನ್ನೆ ದಿನ ಕಾರೊಂದು ಮತ್ತೊಂದು ಕಾರಿನ ಮೇಲೆ ಹತ್ತಿದೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುತ್ತಿದ್ದಾಗ ಘಟನೆ ಸಂಭವಿಸಿದೆ.
ಬ್ಯಾರಿಕೇಡ್ ಗಮನಿಸದೆ ಹಠಾತ್ತಾಗಿ ಕಾರು ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಗುದ್ದಿದ ರಭಸಕ್ಕೆ ಇನ್ನೊಂದು ಕಾರಿನ ಮೇಲೇರಿ ಹೋಗಿದೆ. ಅದೃಷ್ಟವಶಾತ್ 2 ಕಾರುಗಳಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ..
ಕೊಡಗು ಜಿಲ್ಲೆ ಪೂನ್ನಂಪೇಟೆ ತಾಲೂಕು ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಇಂದು ಬೆಳಿಗ್ಗೆ 10 ಗಂಟೆಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ರವರ ನಿವಾಸದ ಕಡೆ ಹುಲಿ ಒಂದು ರಸ್ತೆಯಲ್ಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ.