ಕೃಷಿ ಇಲಾಖೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ
ವಿಜಯ ದರ್ಪಣ ನ್ಯೂಸ್….
ಕೃಷಿ ಇಲಾಖೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ18: ಕೃಷಿ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರ ಪುರಸ್ಕೃತ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಸಹಾಯಧನಕ್ಕಾಗಿ ಕೃಷಿ ಇಲಾಖೆಯಿಂದ ನೊಂದಾಯಿತರಾದ ರೈತರು/ ರೈತ ಉತ್ಪಾದಕರ ಸಂಸ್ಥೆ/ಸ್ವಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗ ಸೃಜಿಸಲು, ದ್ವಿದಳಧಾನ್ಯ ಮತ್ತು ಸಿರಿಧಾನ್ಯ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ.
1. ದ್ವಿದಳಧಾನ್ಯ ಉತ್ಪನ್ನಗಳ ಖರೀದಿ ಕೇಂದ್ರ ಸ್ಥಾಪಿಸಲು, ಗ್ರೇಡಿಂಗ್ ಮತ್ತು ಸಂಸ್ಕರಣಾ ಘಟಕಗಳಿಗೆ ಗರಿಷ್ಠ ರೂ.5 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
2. ಸಿರಿಧಾನ್ಯ ಮತ್ತು ದ್ವಿದಳಧಾನ್ಯಗಳಿಗೆ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಗರಿಷ್ಠ ರೂ.5 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
3. ಸಿರಿಧಾನ್ಯಗಳ ಸಾವಯವ ಪ್ರಮಾಣೀಕರಣ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಗರಿಷ್ಠ ರೂ.5ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
4. ರೈತ/ ರೈತ ಉತ್ಪಾದಕರ ಸಂಸ್ಥೆ/ಸ್ವಸಹಾಯ ಗುಂಪುಗಳಿಗೆ ಸಿರಿಧಾನ್ಯದ ಪ್ರಾಥಮಿಕ ಮತ್ತು ದ್ವಿತೀಯ ಸಂಸ್ಕರಣಾ ಘಟಕಗಳೊಂದಿಗೆ ಶೇಖರಣಾ ಗೋದಾಮು ಸೌಲಭ್ಯಕ್ಕೆ ಗರಿಷ್ಠ ರೂ.50 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
&&&&&&&&&&&&&&&&&&&&&&&&&&
ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆಬ್ರವರಿ 18 :-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಂಡಿರುವ ಯೋಜನೆಯಾದ “ಯುವಸ್ಪಂದನ” ದಲ್ಲಿ ಯುವ ಪರಿವರ್ತಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪದವಿ ಹಾಗೂ ಮೇಲ್ಪಟ್ಟು ಶೈಕ್ಷಣಿಕ ಅರ್ಹತೆ, ವಯಸ್ಸು 21 ರಿಂದ 35 ವರ್ಷ ವಯಸ್ಸಾಗಿರಬೇಕು. ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ , ನೆಲಮಂಗಲ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಸಾರ್ವಜನಿಕರ ಮಾನಸಿಕ ಆರೋಗ್ಯ ಸಂವರ್ಧನ ಸೇವೆಗಳ ಬಗ್ಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು ಹೊಂದಿರಬೇಕು.
ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು ಅವಶ್ಯಕ. ಪರಸ್ಪರ ಭಾಂದವ್ಯಾಭಿವೃದ್ಧಿಯ ಕೌಶಲ್ಯ, ತರಬೇತಿ ಮತ್ತು ಕೌಶಲ್ಯ ಸಂಹವನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ಥೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯ ಹೊಂದಿರಬೇಕು.
ಆಸಕ್ತಿಯುಳ್ಳವರು ಫೆಬ್ರವರಿ 28 ರೊಳಗೆ ಅರ್ಜಿಯನ್ನು ತಮ್ಮ ಸ್ವ- ವಿವರದೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಠಡಿ ಸಂಖ್ಯೆ-112, ಬೀರಸಂದ್ರ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 9353321355 / 6360005441 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.