ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ
ವಿಜಯ ದರ್ಪಣ ನ್ಯೂಸ್….
ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್24:- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಾಗೂ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮೂರು ತಿಂಗಳ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು.
ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು.
ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಜೊತೆಗೆ ಆರ್ಥಿಕವಾಗಿ ಸಧೃಡರಾಗಬೇಕು ಎಂಬ ಉದ್ದೇಶದಿಂದ ಸ್ವ-ಸಹಾಯ ಗುಂಪುಗಳ ಮಹಿಳೆಯರಿಗೆ ಸೂಕ್ಷ್ಮ ಕೌಶಲ್ಯ ಪೂರ್ವಭಾವಿ ಅಭಿವೃದ್ಧಿ ತರಬೇತಿ ನೀಡಲಾಗಿದೆ.
ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸಿಕೊಡುವ ವಿವಿಧ ಬಗೆಯ ತಿಂಡಿ ತಿನಿಸುಗಳು ತಯಾರಿ, ಕರಕುಶಲ ವಸ್ತುಗಳು ತಯಾರಿ,ಮಾರಾಟ, ಸೀರೆ-ಬಟ್ಟೆ ಉತ್ಪನ್ನಗಳನ್ನು ಮಾರಾಟ ಮುಂತಾದವುಗಳ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗಿದ್ದು. ತರಬೇತಿಯ ಜೊತೆಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ಸ್ವ ಉದ್ಯೋಗ ಸೃಷ್ಟಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಲಿದೆ.
ಕಾರ್ಯಕ್ರಮದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಾ ಮುಖ್ಯ ವ್ಯವಸ್ಥಾಪಕ ಶ್ರೀನಿವಾಸ್, ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ ಯೋಜನಾ ನಿರ್ದೇಶಕ ಪ್ರಸಾದ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಾ ಯೋಜನಾ ನಿರ್ದೇಶಕ ಗೌತಮ್ ವಿಕಾಸ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಅಧಿಕಾರಿಗಳು ಮತ್ತು ಸ್ವ-ಸಹಾಯ ಗುಂಪುಗಳ ಮಹಿಳೆಯರು ಉಪಸ್ಥಿತರಿದ್ದರು.